ಯೋಗ ಡೇ ಟ್ವೀಟ್ : ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು
ವಿಶ್ವ ಯೋಗ ದಿನದಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಸೇನೆಯ ಇಮೇಜ್ ನ್ನು ಅಪಮಾನಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಮುಂಬೈ ಮೂಲದ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ನವದೆಹಲಿ: ವಿಶ್ವ ಯೋಗ ದಿನದಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಸೇನೆಯ ಇಮೇಜ್ ನ್ನು ಅಪಮಾನಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಮುಂಬೈ ಮೂಲದ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನ ಹಾಗೂ ಸೇನೆಗೆ ಅಗೌರವ ನೀಡುವ ಉದ್ದೇಶದಿಂದ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವಕೀಲ ಅಟಲ್ ದುಬೆ ಆರೋಪಿಸಿದ್ದಾರೆ. ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಜೂನ್ 21 ರಂದು 4.12ರ ಸಮಯದಲ್ಲಿ ನವ ಭಾರತ ಎಂಬ ಕ್ಯಾಪ್ಷನ್ ನೀಡಿ ರಾಹುಲ್ ಗಾಂಧಿ ಎರಡು ಟ್ವೀಟ್ ಮಾಡಿದ್ದಾರೆ. ಯೋಧರೊಂದಿಗೆ ವ್ಯಾಯಾಮಾ ಮಾಡುತ್ತಿರುವ ಸೇನೆಯ ಶ್ವಾನಗಳ ಚಿತ್ರಗಳನ್ನು ಪಡೆಯಲಾಗಿದೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಶಾಂತಿಯನ್ನು ಕೆಡಿಸುವ ಉದ್ದೇಶದಿಂದ ಈ ರೀತಿಯ ಪೋಸ್ಟ್ ಮಾಡಲಾಗಿದ್ದು, ಇದು ಸೇನೆಗೆ ಮಾಡಿದ ಅವಮಾನವಾಗಿದ್ದು, ಕಾನೂನು ಪ್ರಕಾರ ರಾಹುಲ್ ಗಾಂಧಿಗೆ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.