ಕೋಡಿಯೇರಿ ಬಾಲಕೃಷ್ಣನ್ 
ದೇಶ

ಯಾವುದೇ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳಲ್ಲ: ಸಿಪಿಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್

ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ...

ತಿರುವನಂತಪುರ: ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ. 
ಹಿರಿಯ ಮಗನಾದ ಬಿನೊಯ್ ಕೊಡಿಯೇರಿ ವಿರುದ್ಧ 33 ವರ್ಷದ ಮಹಿಳೆ ದೂರು ದಾಖಲಿಸಿರುವ ಪ್ರಕರಣದ ಸಂಬಂಧ ಪ್ರತಿಕ್ರಿಯಿಸಿರುವ ಅವರು, ನನ್ನ ಪಕ್ಷ (ಸಿಪಿಐ-ಎಂ) ಅಥವಾ ನಾನು ಬಿನೊಯ್ ಕೊಡಿಯೇರಿಯನ್ನು ರಕ್ಷಿಸುವುದಿಲ್ಲ. ಅವನು ವಯಸ್ಕ. ಅವನು ಸ್ವತಂತ್ರವಾಗಿ ಬದುಕುತ್ತಾನೆ ಮತ್ತು ತಾನು ಮಾಡಿರುವ ಕಾರ್ಯಗಳಿಗೆ ಜವಾಬ್ದಾರನಾಗಿರುತ್ತಾನೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಅತ್ಯಾಚಾರ ವಿಚಾರವಾಗಿ ವಿವಾದ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಕೊಡಿಯೇರಿ ಬಾಲಕೃಷ್ಣನ್ ಪ್ರತಿಕ್ರಿಯೆ ನೀಡಿದ್ದಾರೆ.ಮುಂಬೈನ ಮಾಜಿ ಬಾರ್ ನರ್ತಕಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಬಿನೊಯ್ ಕೊಡಿಯೇರಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.  ಅಲ್ಲದೆ ಇಬ್ಬರಿಗೆ 8 ವರ್ಷದ ಮಗನಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP