ದೇಶ

ಕಾಂಗ್ರೆಸ್ ನ ಮುಂದಿನ ಅಧ್ಯಕ್ಷ ಯಾರು: ಮಣಿಶಂಕರ್ ಅಯ್ಯರ್ ಹೇಳಿದ್ದಿಷ್ಟು

Srinivas Rao BV
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳು ಕಡಿಮೆ ಇದ್ದು, ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರ ಹೆಸರು ಕಾಂಗ್ರೆಸ್ ಅಧ್ಯಕ್ಷರ ಹುದ್ದೆಗೆ ಕೇಳಿಬಂದಿದೆ. 
ಈ ನಡುವೆ ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಮಾತನಾಡಿದ್ದು ಗಾಂಧಿಯೇತರರು ಯಾರಾದಾರೂ ಕಾಂಗ್ರೆಸ್ ನ ಅಧ್ಯಕ್ಷರಾಗಬಹುದು ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಅಧ್ಯಕ್ಷಗಾದಿಗೆ ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯಾರಾದರೂ ಆಯ್ಕೆಯಾಗಬಹುದು ಆದರೆ ಗಾಂಧಿ ಕುಟುಂಬದವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿರಬೇಕಾಗುತ್ತದೆ ಎಂದು ಅಯ್ಯರ್ ಹೇಳಿದ್ದಾರೆ.
ಬಿಜೆಪಿಯ ಉದ್ದೇಶ ಗಾಂಧಿ ಮುಕ್ತ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡುವುದು ಎಂದು ಮಣಿಶಂಕರ್ ಅಯ್ಯರ್ ಇದೇ ವೇಳೆ ಹೇಳಿದ್ದಾರೆ.
SCROLL FOR NEXT