ದೇಶ

ಲೋಕಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವೈಎಸ್ ಆರ್ ಕಾಂಗ್ರೆಸ್ ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ

Nagaraja AB
ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಈಡೇರಿಸದಿದ್ದರೆ ವೈಎಸ್ ಆರ್ ಕಾಂಗ್ರೆಸ್  ಆಡಳಿತಾರೂಢ ಎನ್ ಡಿಎ ಸರ್ಕಾರದ ಭಾಗವಾಗಿರುವುದಿಲ್ಲ, ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು  ಆ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
ವೈಎಸ್ ಆರ್ ಕಾಂಗ್ರೆಸ್  ಲೋಕಸಭೆಯಲ್ಲಿ 22 ಸದಸ್ಯರನ್ನು ಹೊಂದಿರುವ ನಾಲ್ಕನೇ ಅತಿದೊಡ್ಡ ಪಕ್ಷವಾಗಿದ್ದು,ಆಡಳಿತ ಹಾಗೂ ಪ್ರತಿಪಕ್ಷಗಳಿಂದ ಅಂತರವನ್ನು ಕಾಯ್ದುಕೊಂಡಿದೆ ಎಂದು ಅವರು ಸ್ಪಷ್ಪಪಡಿಸಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆಯದಿರಲು ಕಾಂಗ್ರೆಸ್ ಪಕ್ಷವೂ ಕಾರಣವಾಗಿದೆ. ಅದು ರಾಜ್ಯವನ್ನು ವಿಭಜನೆ ಮಾಡಿತು, ಆದರೆ, ವಿಶೇಷ ಸ್ಥಾನಮಾನ ನೀಡಿಲ್ಲ. ಆದ್ದರಿಂದ ಆ ಪಕ್ಷದಿಂದಲೂ ನಾವು ಅಂತರ ಕಾಯ್ದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ದೇಶದ ಹಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಆಡಳಿತಾರೂಢ ಸರ್ಕಾರವನ್ನು ಬೆಂಬಲ ನೀಡಬಹುದು, ಡೆಪ್ಯುಟಿ ಸ್ಪೀಕರ್ ಹುದ್ದೆಗಾಗಿ ನೇರವಾಗಿ ಅಥವಾ ಔಪಚಾರಿಕವಾಗಿ ಯಾವುದೇ ಮಾಹಿತಿ ಬಂದಿಲ್ಲ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವವರೆಗೂ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಬಯಸುವುದಿಲ್ಲಎಂದು ಅವರು ಸ್ಪಷ್ಪಪಡಿಸಿದ್ದಾರೆ.
SCROLL FOR NEXT