ಛತ್ತೀಸ್ ಗಢ: ಕುಟುಂಬ ಸದಸ್ಯರ ಎದುರೇ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ನಕ್ಸಲರು 
ದೇಶ

ಛತ್ತೀಸ್ ಗಢ: ಕುಟುಂಬ ಸದಸ್ಯರ ಎದುರೇ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ನಕ್ಸಲರು

ನಕ್ಸಲರು ಪೊಲೀಸ್ ಅಧಿಕಾರಿಯನ್ನು ಕುಟುಂಬ ಸದಸ್ಯರ ಎದುರೇ ಹತ್ಯೆ ಮಾಡಿರುವ ಘಟನೆ ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ನಡೆದಿದೆ.

ರಾಯ್ ಪುರ್: ನಕ್ಸಲರು ಪೊಲೀಸ್ ಅಧಿಕಾರಿಯನ್ನು ಕುಟುಂಬ ಸದಸ್ಯರ ಎದುರೇ ಹತ್ಯೆ ಮಾಡಿರುವ ಘಟನೆ ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ನಡೆದಿದೆ. 
ವಾರಕ್ಕೊಮ್ಮೆ ನಡೆಯುವ ಹಾತ್ ಬಜಾರ್ (ವಾರದ ಮಾರುಕಟ್ಟೆ)ಯಲ್ಲಿ ಈ ಘಟನೆ ನಡೆದಿದ್ದು, ಸಹಾಯಕ ಪೇದೆ ಚೈತು ರಾಮ್ ಮೃತರೆಂದು ಗುರುತಿಸಲಾಗಿದೆ. 
ಮಿರ್ತೂರ್ ನ ನಿವಾಸಿಯಾಗಿದ್ದ ಚೈತು ರಾಮ್ ಅವರು ಕುಟುಂಬ ಸದಸ್ಯರೊಂದಿಗೆ ಮಾರುಕಟ್ಟೆಗೆ ತೆರಳಿದ್ದರು. ಈ ವೇಳೆ ಮಾವೋವಾದಿಗಳ ತಂಡ ಮಾರಕಾಸ್ತ್ರಗಳಿಂದ ಚೈತುರಾಮ್ ಮೇಲೆ ಹಲ್ಲೆ ನಡೆಸಿದ್ದಾರೆ. ಆದರೆ ಅವರ ಕುಟುಂಬ ಸದಸ್ಯರ ಮೇಲೆ ಯಾವುದೇ ದಾಳಿ ನಡೆಸಿಲ್ಲ. 
ಪೊಲೀಸ್ ಪೇದೆಯ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಕೊಲೆಗಡುಕ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!