ದೇಶ

ಎನ್ಸಿಫಾಲಿಟೀಸ್ ಸೋಂಕು: ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಬಿಹಾರ ಸರ್ಕಾರಕ್ಕೆ 'ಸುಪ್ರೀಂ' ಆದೇಶ

Sumana Upadhyaya
ನವದೆಹಲಿ: ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಎನ್ಸಿಫಾಲಿಟೀಸ್ ಸೋಂಕು ಎಂಬ ಮೆದುಳು ಜ್ವರದಿಂದ 140ಕ್ಕೂ ಅಧಿಕ ಮಕ್ಕಳು ಮೃತಪಟ್ಟಿದ್ದು ಈ ಬಗ್ಗೆ ಬಿಹಾರ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ವರದಿ ಕೇಳಿದ್ದು ಏಳು ದಿನಗಳೊಳಗೆ ಉತ್ತರ ನೀಡಬೇಕೆಂದು ಸೋಮವಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬಿ ಆರ್ ಗವೈ ಅವರನ್ನೊಳಗೊಂಡ ನ್ಯಾಯಪೀಠ ಬಿಹಾರ ಸರ್ಕಾರಕ್ಕೆ ಆದೇಶ ನೀಡಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ, ಮಕ್ಕಳಿಗೆ ಆಹಾರದಲ್ಲಿ ಸಿಗುತ್ತಿರುವ ಪೌಷ್ಟಿಕಾಂಶ ಮತ್ತು ರಾಜ್ಯದಲ್ಲಿನ ಶುಚಿತ್ವದ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಬಿಹಾರ ಸರ್ಕಾರಕ್ಕೆ ಆದೇಶ ನೀಡಿದೆ.
ಘಟನೆಗೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಸಲ್ಲಿಸಿದ ವಿಚಾರಣೆ ವೇಳೆ ವಕೀಲರು ನ್ಯಾಯಾಲಯಕ್ಕೆ ಉತ್ತರ ನೀಡಿ ಇದೇ ರೀತಿ ಹಿಂದೆ ಉತ್ತರ ಪ್ರದೇಶದಲ್ಲಿ ಮಕ್ಕಳು ಮೃತಪಟ್ಟಿದ್ದರು ಎಂದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಬಿಹಾರ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ನೊಟೀಸ್ ಜಾರಿ ಮಾಡಿದೆ.
ಇನ್ನು 10 ದಿನಗಳ ನಂತರ ವಿಚಾರಣೆ ಮುಂದೂಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
SCROLL FOR NEXT