ನವದೆಹಲಿ: ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ ಎಸ್ ಜೈಶಂಕರ್ ಅವರು ಗುಜರಾತ್‌ನಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಗುಜರಾತ್‌ನಿಂದ ಮೇಲ್ಮನೆಗೆ ನಡೆಯುವ ಉಪ ಚುನಾವಣೆಯಲ್ಲಿ ಮತ್ತೊಂದು ಸ್ಥಾನಕ್ಕೆ ಜುಜಾಲ್ಜಿ ಮಾತೂರ್ಜಿ ಠಾಕೂರ್ ಅವರನ್ನು ಕಣಕ್ಕಿಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮೇಲ್ಮನೆ ಸದಸ್ಯರಾದ ಅಮಿತ್ ಶಾ ಮತ್ತು ಸ್ಮೃತಿ ಇರಾನಿ 17ನೇ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಗುಜರಾತ್‌ನ ಎರಡು ರಾಜ್ಯಸಭಾ ಸ್ಥಾನಗಳು ಖಾಲಿಯಾಗಿವೆ
ಮತ್ತೋರ್ವ ರಾಜ್ಯಸಭಾ ಸದಸ್ಯ ರವಿಶಂಕರ್ ಪ್ರಸಾದ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಡಾ ಜೈಶಂಕರ್ ಅವರು ನಾಮಪತ್ರ ಸಲ್ಲಿಸಲು ಇಂದು ಅಹ್ಮದಾಬಾದ್‌ಗೆ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics