ಸಾಂದರ್ಭಿಕ ಚಿತ್ರ 
ದೇಶ

ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ

ನಿನ್ನೆ ನಿಧನರಾದ ಬಿಜೆಪಿ ಹಿರಿಯ ಮುಖಂಡ , ರಾಜ್ಯಸಭಾ ಸದಸ್ಯ ಮದಲ್ ಲಾಲ್ ಸೈನಿ ಅವರಿಗೆ ರಾಜ್ಯಸಭೆಯಲ್ಲಿ...

ನವದೆಹಲಿ: ನಿನ್ನೆ ನಿಧನರಾದ ಬಿಜೆಪಿ ಹಿರಿಯ ಮುಖಂಡ , ರಾಜ್ಯಸಭಾ ಸದಸ್ಯ ಮದಲ್ ಲಾಲ್ ಸೈನಿ ಅವರಿಗೆ ರಾಜ್ಯಸಭೆಯಲ್ಲಿ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು
ರಾಜಸ್ತಾನ ಬಿಜೆಪಿ ಅಧ್ಯಕ್ಷರಾಗಿದ್ದ ಮದಲ್ ಲಾಲ್ ಸೈನಿ ಅವರು ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು, ಅವರಿಗೆ 75 ವರ್ಷ ವಯಸ್ಸಾಗಿತ್ತು
ಇಂದು ಬೆಳಗ್ಗೆ 11 ಗಂಟೆಗೆ ಮೇಲ್ಮನೆ ಕಲಾಪ, ಶೂನ್ಯ ವೇಳೆಗಾಗಿ ಆರಂಭಗೊಂಡಿತು, ಸಭಾಪತಿ ವೆಂಕಯ್ಯ ನಾಯ್ಡು ಅವರು ಮದನ್ ಲಾಲ್ ಅವರ ನಿಧನದ ಸುದ್ದಿ ಪ್ರಕಟಿಸಿದರು. ಶ್ವಾಸಕೋಶ ಸೋಂಕಿನಿಂದ ಮದನ್ ಲಾಲ್ ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿಸಿದರು
1943, ಜುಲೈ 13ರಂದು ಜನಿಸಿದ್ದ ಮದನ್ ಲಾಲ್, ರಾಜಸ್ತಾನದ ಉದಯಪುರ್‌ರ್ವಾತಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದರು, ಕಳೆದ ವರ್ಷ ಅವರನ್ನು ರಾಜಸ್ತಾನದ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.
ಆರ್‌ಎಸ್‍ಎಸ್‍ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು, ಭಾರತೀಯ ಕಿಸಾನ್ ಮೋರ್ಚಾದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಸೈನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಮದನ್ ಲಾಲ್ ಸೈನಿ ಅವರ ನಿಧನದಿಂದ ಬಿಜೆಪಿ ಕುಟುಂಬಕ್ಕೆ ಅಪಾರ ನಷ್ಟವಾಗಿದೆ.
ರಾಜಸ್ತಾನದಲ್ಲಿ ಪಕ್ಷವನ್ನು ಬಲಪಡಿಸಲು ಅವರು ಅಪಾರ ಕೊಡುಗೆ ನೀಡಿದ್ದರು. ಸರಳ ಸ್ವಭಾವ ಮತ್ತು ಸಮುದಾಯ ಸೇವೆಯ ಪ್ರಯತ್ನಗಳಿಗಾಗಿ ಅವರನ್ನು ವ್ಯಾಪಕವಾಗಿ ಗೌರವಿಸಲಾಯಿತು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ, ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯ ಸಂಸದ ಮದನ್ ಲಾಲ್ ಸೈನಿ ಅವರ ನಿಧನದಿಂದ ತೀವ್ರ ಬೇಸರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದ ಅವರು, ತಳಮಟ್ಟದ ಜನರಿಗೆ ಸೇವೆ ಸಲ್ಲಿಸಲು ಬದ್ಧತೆ ಹೊಂದಿದ್ದರು. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪ ಸೂಚಿಸುತ್ತೇನೆ ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಮದಲ್ ಲಾಲ್ ಸೈನಿಜಿ ಅವರ ಆಕಸ್ಮಿಕ ನಿಧನದಿಂದ ತಮಗೆ ಆಘಾತವಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಅವರೊಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಸರಳತೆಗೆ ಅವರು ಹೆಸರುವಾಸಿಯಾಗಿದ್ದರು. ಜನರೊಂದಿಗೆ ಅವರು ನೇರ ಸಂಪರ್ಕ ಹೊಂದಿದವರಾಗಿದ್ದರು. ದೀರ್ಘ ಕಾಲ ಅವರು ಕಾರ್ಮಿಕ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರ ಕುಟುಂಬಕ್ಕೆ ಹೃದಯತುಂಬಿದ ಸಂತಾಪಗಳು. ಓಂಶಾಂತಿ ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.
ಸೈನಿ ಅವರ ನಿಧನದಿಂದ ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT