ಅಮಿತಾಭ್ ಕಾಂತ್ 
ದೇಶ

ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವಧಿ 2 ವರ್ಷ ವಿಸ್ತರಣೆ

ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅಮಿತಾಭ್ ಕಾಂತ್ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲ...

ನವದೆಹಲಿ: ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅಮಿತಾಭ್ ಕಾಂತ್ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲ ವಿಸ್ತರಿಸಿದೆ.
ಜೂನ್ 30, 2019ಕ್ಕೆ ಅಂತ್ಯಗೊಳ್ಳುತ್ತಿದ್ದ ಅಮಿತಾಭ್ ಕಾಂತ್ ಅವರ ಅವಧಿಯನ್ನು ಜೂನ್ 30, 2021ರ ವರೆಗೆ ವಿಸ್ತರಿಸಲು ಸಂಪುಟ ನೇಮಕಾತಿ ಸಮಿತಿ ಒಪ್ಪಿಗೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಹಿಂದಿನ ನಿಯಾಮಾವಳಿಗಳಂತೆ ನೀತಿ ಆಯೋಗದ ಸಿಇಒ ಅವಧಿಯನ್ನು ಜೂನ್ 30, 2021ವರೆಗೂ ವಿಸ್ತರಿಸಲು ಕೇಂದ್ರ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಅಮಿತಾಭ್ ಕಾಂತ್ 1980ರ ಬ್ಯಾಚ್ ನ ಕೇರಳ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.  
2016ರಲ್ಲಿ ಎರಡು ವರ್ಷಗಳ ಅವಧಿಗೆ ನೀತಿ ಆಯೋಗದ ಸಿಇಒ ಆಗಿ ನೇಮಕಗೊಂಡಿದ್ದ ಅಮಿತಾಭ್ ಕಾಂತ್ ಅವಧಿಯನ್ನು ಎರಡನೇ ಬಾರಿ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ