ಆಕಾಶ್ ವಿಜಯ್ ವರ್ಗೀಯಾ 
ದೇಶ

ಅಧಿಕಾರಿ ಮೇಲೆ ಬ್ಯಾಟ್‌ನಿಂದ ಹಲ್ಲೆ: ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ ಬಂಧನ

ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿದ ಬಿಜೆಪಿ ಹಿರಿಯ ನಾಯಕ ಕೈಲಾಶ್‌ ವಿಜಯ್‌ ವರ್ಗೀಯ ಅವರ ಪುತ್ರ, ಬಿಜೆಪಿ...

ಇಂದೋರ್‌: ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿದ ಬಿಜೆಪಿ ಹಿರಿಯ ನಾಯಕ ಕೈಲಾಶ್‌ ವಿಜಯ್‌ ವರ್ಗೀಯ ಅವರ ಪುತ್ರ, ಬಿಜೆಪಿ ಶಾಸಕ ಆಕಾಶ್‌ ವಿಜಯ್‌ ವರ್ಗೀಯ ಅವರನ್ನು ಮಧ್ಯ ಪ್ರದೇಶ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಶಾಸಕರು ಅಧಿಕಾರಿ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಆಕಾಶ್ ವಿಜಯ್ ವರ್ಗೀಯ ಮತ್ತು ಇತರೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಇಂದೋರ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಆಕಾಶ್‌ ಅವರು, ತಮ್ಮ ಬೆಂಬಲಿಗನೋರ್ವನ ಕಟ್ಟಡ ಕೆಡವಲು ವಿರೋಧ ವ್ಯಕ್ತಪಡಿಸಿದ್ದಾರೆ. 
ಕಟ್ಟಡ ಕೆಡವದಂತೆ ಆಕಾಶ್‌ ಆಜ್ಞೆ ನೀಡಿದರೂ, ಮಾತು ಕೇಳದೇ ಇದ್ದ ಅಧಿಕಾರಿ ವಿರುದ್ಧ ಕೆಂಡಾಮಂಡಲರಾದ ಶಾಸಕ ಆಕಾಶ್‌, ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದಿದ್ದರು. ಬಳಿಕ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದ ಶಾಸಕ, ಬಿಜೆಪಿಯಲ್ಲಿ ಮೊದಲು ಮಾತಿನಿಂದ ಹೇಳುತ್ತೇವೆ ನಂತರ ಕೈಗೆ ಬ್ಯಾಟ್ ತೆಗೆದುಕೊಳ್ಳುತ್ತೇವೆ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಅಮೆರಿಕ ನೌಕಾಪಡೆ ದಿಗ್ಬಂಧನ ಜಾರಿ; ಬಂದರುಗಳಲ್ಲಿ ನಿರ್ಬಂಧ ಖಚಿತಪಡಿಸಿದ ಯುಕೆ!

IPL 2026: ರಾಜಸ್ಥಾನದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 57 ರನ್ ಗಳ ಜಯ; ಒಂದೇ ಓವರ್ ನಲ್ಲಿ 3 ವಿಕೆಟ್; ಚರಿತ್ರೆ ಸೃಷ್ಟಿಸಿದ ಪ್ರಫುಲ್ ಹಿಂಗೆ

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

SCROLL FOR NEXT