ದೇಶ

ವಿವಿಐಪಿ ಚಾಪರ್ ಹಗರಣ: ರಾಜೀವ್ ಸಕ್ಸೇನಾ ವಿದೇಶ ಪ್ರವಾಸಕ್ಕೆ ಸುಪ್ರೀಂ ತಡೆ

Raghavendra Adiga
ನವದೆಹಲಿ: ಬಹುಕೋಟಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ಆರೋಪಿ ರಾಜೀವ್ ಸಕ್ಸೇನಾ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಅವಕಾಶ ಕಲ್ಪಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ರಾಜೀವ್ ಸಕ್ಸೇನಾ ವಿರುದ್ಧ ಐಟಿ ಹಾಗೂ ಕಪ್ಪುಹಣ ಕಾಯ್ದೆಗಳ ಉಲ್ಲಂಘನೆಯ ಕೆಲ ಹೊಸ ಅಂಶಗಳು ಬೆಳಕಿಗೆ ಬಂದಿವೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲರು ವಾದ ಮಂಡಿಸಿದ ಹಿನ್ನೆಲೆಯಲ್ಲಿ ರಾಜೀವ್ ಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ರಜಾಕಾಲದ ನ್ಯಾಯಪೀಠ, ಈ ಕುರಿತು ವಿವರ ನೀಡುವಂತೆ ಸೂಚಿಸಿದೆ.
ಇದೇ ವೇಳೆ  ರಾಜೀವ್ ಸಕ್ಸೇನಾ ಅವರ ಅನಾರೋಗ್ಯದ ತಪಾಸಣೆಗೆ ಪ್ರತ್ಯೇಕ ತಂಡ ರಚಿಸುವಂತೆ ಏಮ್ಸ್ ನಿರ್ದೇಶಕರಿಗೆ ನ್ಯಾಯಪೀಠ ಸೂಚನೆ ನೀಡಿತು. 
SCROLL FOR NEXT