ದೇಶ

ಬಿಜೆಪಿ ರಾಮ ಮಂದಿರ ನಿರ್ಮಿಸುವುದಿಲ್ಲ: ಶಂಕರಾಚಾರ್ಯ

Lingaraj Badiger
ಮಥುರಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಬಿಜೆಪಿ ಮೊದಲಿನಿಂದಲೂ ಇದೇ ಕೆಲಸವನ್ನೇ ಮಾಡುತ್ತಿದೆ ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಥುರಾದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರಾಮ ಮಂದಿರ ನಿರ್ಮಿಸುವುದಿಲ್ಲ. ಏಕೆಂದರೆ ಸಂಸತ್ತಿನ ಪ್ರತಿ ಸದಸ್ಯರು ಜಾತ್ಯತೀತತೆಯ ಪ್ರಮಾಣ ಮಾಡಿದ್ದಾರೆ ಎಂದರು.
ಇದೇ ವೇಳೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಸಂಸತ್ತಿನಲ್ಲಿ ಮತ್ತೆ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿರುವುದನ್ನು ಪ್ರಶ್ನಿಸಿದ ಶಂಕರಾಚಾರ್ಯ ಅವರು, ಮೊದಲ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಗೆ ಅವಕಾಶ ಮಾಡಿಕೊಡುವುದರಿಂದ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಎರಡನೇ ಮದುವೆಯಾದ ವ್ಯಕ್ತಿಯನ್ನು ಜೈಲಿಗೆ ಹಾಕಿದರೆ ಮೊದಲ ಪತ್ನಿ ಉಪಜೀವನಕ್ಕೆ ಏನು ಮಾಡುಬೇಕು? ಹಣ ನೀಡುವವರು ಯಾರು? ಎಂದು ಪ್ರಶ್ನಿಸಿದ ಅವರು, ಹಿಂದೂ ಕಾನೂನಿನಂತೆ ಮುಸ್ಲಿಮರಿಗೂ ಮೊದಲ ಪತ್ನಿ ಬದುಕಿರುವಾಗ ಅಥವಾ ಕಾನೂನು ಪ್ರಕಾರ ವಿಚ್ಛೇದನ ಪಡೆಯದೇ ಮತ್ತೊಂದು ಮದುವೆಯಾಗದಂತೆ ತಡೆಯುವ ಕಾನೂನು ಜಾರಿಗೆ ತರಬೇಕು ಎಂದಿದ್ದಾರೆ.
SCROLL FOR NEXT