ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ದೆಹಲಿ ಸರ್ಕಾರದಿಂದ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ
ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ನವದೆಹಲಿ: ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ಇಂದು ಲೋಕಸಭೆಯಲ್ಲಿ ಟಿಎಂಸಿ ಸಂಸದ ಸೌಗತ ರಾಯ್ ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ, ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡುವುದಾಗಿ ಘೋಷಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮೆಟ್ರೋ ಮ್ಯಾನ್ ಎಂದೇ ಖ್ಯಾತರಾದ ದೆಹಲಿ ಮೆಟ್ರೋದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ಅವರು, ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.