ದೇಶ

ಉತ್ತರ ಪ್ರದೇಶ ಕ್ರಿಮಿನಲ್ ಗಳ ಸ್ವರ್ಗ ಎಂದಿದ್ದ ಪ್ರಿಯಾಂಕಾಗೆ ಅಂಕಿ ಅಂಶಗಳ ಸಮೇತ ತಿರುಗೇಟು ಕೊಟ್ಟ ಪೊಲೀಸರು!

Srinivasamurthy VN
ನವದೆಹಲಿ: ಯೋಗಿ ಆದಿತ್ಯಾನಾಥ್ ಅವರ ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ ಗಳು ಆರಾಮಾಗಿ ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶ ಪೊಲೀಸರು ಖಡಕ್ ತಿರುಗೇಟು ನೀಡಿದ್ದಾರೆ.
ಈ ಹಿಂದೆ ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರಿಮಿನಲ್ ಗಳು ಆರಾಮಾಗಿ ಓಡಾಡುತ್ತಿದ್ದಾರೆ ಎಂಬ ಪ್ರಿಯಾಂಕ ಗಾಂಧಿ ಹೇಳಿಕೆಗೆ ಇದೀಗ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಪೊಲೀಸರು ಅಂಕಿ ಅಂಶಗಳ ಸಮೇತ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಉತ್ತರ ಪ್ರದೇಶ ಪೊಲೀಸರು, 'ಮುಖ್ಯ ಅಪರಾಧ ಪ್ರಕರಣಗಳಲ್ಲಿ ಆಪರಾಧಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ. ಡಕಾಯಿತಿ, ಕೊಲೆ, ದರೋಡೆ ಮತ್ತು ಅಪಹರಣ ಪ್ರಕರಣಗಳು ಕಡಿಮೆಯಾಗಿವೆ ಎಂದಿದ್ದಾರೆ. ಅಂತೆಯೇ ಈ ಕುರಿತಂತೆ ಅಂಕಿ ಅಂಶಗಳನ್ನೂ ನೀಡಿರುವ ಅವರು, 'ಅಪರಾಧಗಳ ಸಂಖ್ಯೆಯಲ್ಲಿ ಶೇ.20 ರಿಂದ 35ರಷ್ಟು ಇಳಿಕೆಯಾಗಿದ್ದು, ಸೂಕ್ಷ್ಮ ಅಪರಾಧ ಪ್ರಕರಣಗಳು 48 ಗಂಟೆಗಳಲ್ಲಿಯೇ ಬಗೆಹರಿಯುತ್ತವೆ. ಕಳೆದ ಎರಡು ವರ್ಷಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 9, 225 ಅಪರಾಧಿಗಳನ್ನು ಬಂಧಿಸಲಾಗಿದೆ. ಅಲ್ಲದೆ 81 ಜನ ಅಪರಾಧಿಗಳನ್ನು ವಿವಿಧ ಕಾರ್ಯಾಚರಣೆಗಳಲ್ಲಿ ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ವಿವಿಧ ಕಾಲೇಜುಗಳಲ್ಲಿನ ವರದಿಯನ್ನು ಹಾಕುವ ಮೂಲಕ ರಾಜ್ಯದಲ್ಲಿ ಕ್ರಿಮಿನಲ್ ಗಳು ಆರಾಮಾಗಿ ಓಡಾಡುತ್ತಿದ್ದಾರೆ. ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಅಪರಾಧಗಳಲ್ಲಿ ಕಿವುಡುತನ ಪ್ರದರ್ಶಿಸುತ್ತಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಕೈಕಟ್ಟಿಕುಳಿತಿದ್ದಾರೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದರು.
SCROLL FOR NEXT