ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಸ್ವದೇಶಕ್ಕೆ ವಾಪಾಸ್ ಆಗುತ್ತಿರುವುದು ಸಂತಸದ ವಿಷಯವಾಗಿದೆ. ಆದರೆ, ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಹೆಚ್ಚಿನ ರೀತಿಯಲ್ಲಿ ಹೋರಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಸೇನಾ ಮುಖ್ಯಸ್ಥ ವಿ. ಕೆ. ಸಿಂಗ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ರಿಕ್ತ ಪರಿಸ್ಥಿತಿ ಸಂಬಂಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆಯ ಆದರೆ, ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದರು.
ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಾಸ್ ಆಗುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದಾಗ್ಯೂ, ಪಾಕಿಸ್ತಾನ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಮೊದಲು ಕ್ರಮ ಕೈಗೊಳ್ಳಬೇಕಾಗಿದೆ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಜಿನಿವಾ ಒಪ್ಪಂದದ ಪ್ರಕಾರ ಪರಿಸ್ಥಿತಿ ಬಿಗಡಾಯಿಸಿದ ಸಂದರ್ಭದಲ್ಲಿ ಸೆರೆ ಸಿಕ್ಕ ಯೋಧನನ್ನು ವಾಪಾಸ್ ಸ್ವದೇಶಕ್ಕೆ ಕಳುಹಿಸಬೇಕಾಗಿದೆ. ಇದನ್ನು ಅರ್ಥಮಾಡಿಕೊಂಡಿರುವ ಪಾಕಿಸ್ತಾನ ಅಭಿನಂದನ್ ಹಿಂದಕ್ಕೆ ಕಳುಹಿಸದೆ ಏನು ಮಾಡಲು ಸಾಧ್ಯವಿಲ್ಲ. 1971ರ ಮಾಡಿಕೊಂಡ ಜಿನಿವಾ ಒಪ್ಪಂದವನ್ನು ನಾವು ಮರೆಯಬಾರದು, ನಾವು ಪಾಕಿಸ್ತಾನದ 90 ಸಾವಿರ ಪಾಕಿಸ್ತಾನದವರನ್ನು ಬಿಡುಗಡೆ ಮಾಡಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.