ದೇಶ

ಅಭಿನಂದನ್ ಗೆ ಪಾಕಿಸ್ತಾನದಲ್ಲಿ ಮಾನಸಿಕ ಕಿರುಕುಳ: ವರದಿ

Nagaraja AB

ನವದೆಹಲಿ: ಸುಮಾರು 60 ಗಂಟೆಗಳ ಕಾಲ ಪಾಕಿಸ್ತಾನದ ಸೈನಿಕರ ವಶದಲ್ಲಿದ್ದ  ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್  ಅವರನ್ನು ಮಾನಸಿಕವಾಗಿ ಸಾಕಷ್ಟು ಹಿಂಸಿಸಲಾಗಿತ್ತು ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಆದಾಗ್ಯೂ, ಪಾಕಿಸ್ತಾನಿ ಸೈನಿಕರು ಅಭಿನಂದನ್ ಮೇಲೆ ಯಾವುದೇ ರೀತಿಯ ದೈಹಿಕ ಹಲ್ಲೆ ನಡೆಸಿರಲಿಲ್ಲ ಎಂಬುದು ತಿಳಿದುಬಂದಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಅಭಿನಂದನ್ ಅವರನ್ನು ಸುರಕ್ಷಿತವಾಗಿ ನೋಡಿಕೊಂಡರೂ ಒತ್ತಾಯ ಪೂರ್ವಕ ಹೇಳಿಕೆ ಪಡೆದು ವಿಡಿಯೋ ಬಿಡುಗಡೆ ಮಾಡಲಾಗಿತ್ತು . ಉದ್ದೇಶಪೂರ್ವಕವಾಗಿಯೇ ಬಿಡುಗಡೆ ಪ್ರಕ್ರಿಯೆಯನ್ನು ವಿಳಂಬಗೊಳಿಸಲಾಯಿತು ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ.
SCROLL FOR NEXT