ಸಂಗ್ರಹ ಚಿತ್ರ 
ದೇಶ

ಪಾಕ್‌ನಲ್ಲಿ ಭಾರತೀಯ ವಾಯುಸೇನೆ ನಡೆಸಿದ ಏರ್ ಸ್ಟ್ರೈಕ್‍ನಲ್ಲಿ ಸತ್ತ ಉಗ್ರರೆಷ್ಟು? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು!

ಭಾರತೀಯ ವಾಯುಸೇನೆ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರವನ್ನು ಗುರಿಯನ್ನಾಗಿಸಿಕೊಂಡು ಏರ್ ಸ್ಟ್ರೈಕ್ ನಡೆಸಿತ್ತು.

ನವದೆಹಲಿ: ಭಾರತೀಯ ವಾಯುಸೇನೆ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರವನ್ನು ಗುರಿಯನ್ನಾಗಿಸಿಕೊಂಡು ಏರ್ ಸ್ಟ್ರೈಕ್ ನಡೆಸಿತ್ತು. ಇದಕ್ಕೆ ಸಾಕ್ಷಿ ನೀಡುವಂತೆ ನಮ್ಮ ರಾಜಕಾರಣಿಗಳು ಪಟ್ಟು ಹಿಡಿದಿದ್ದು ಈ ಮಧ್ಯೆ ಪ್ರತ್ಯಕ್ಷದರ್ಶಿಗಳೇ ಅಲ್ಲಿನ ಸಾವು ನೋವಿನ ಬಗ್ಗೆ ವಿವರಿಸಿದ್ದಾರೆ.
ಭಾರತ ನಡೆಸಿದ ಏರ್ ಸ್ಟ್ರೈಕ್ ಸ್ಥಳದಲ್ಲಿ 35ಕ್ಕೂ ಹೆಚ್ಚು ಮೃತದೇಹಗಳನ್ನು ನೋಡಿದ್ದಾಗಿ ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ದಾಳಿ ನಡೆದ ಒಂದು ಗಂಟೆಯ ನಂತರ ಆ ಮೃತದೇಹಗಳನ್ನು ಆ್ಯಂಬುಲೆನ್ಸ್ ನಲ್ಲಿ ಸಾಗಿಸಲಾಯಿತು. ಸುಮಾರು 12 ಮಂದಿ ತಾತ್ಕಾಲಿಕವಾದ ಮರದ ಒಂದೇ ಕಟ್ಟಡದಲ್ಲಿ ಇದ್ದರು. ದಾಳಿಯಲ್ಲಿ ಹಲವು ಮಂದಿ ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸಿದವರು ದಾಳಿ ವೇಳೆ ಹತರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದಾಳಿಯ ಕುರಿತ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ನೀಡಬಾರದು ಎಂದು ಅಲ್ಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು ಎಂದು ಮೂಲಗಳು ಹೇಳಿವೆ. ಅಲ್ಲದೇ ಪ್ರತೀಕಾರದಿಂದ ಅವರು ಬೆಚ್ಚಿಬಿದ್ದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಫಸ್ಟ್ ಪೋಸ್ಟ್ ವಿಶೇಷ ವರದಿ ಪ್ರಕಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT