ಪೂಂಚ್, ರಜೌರಿಗೆ 400 ಹೆಚ್ಚುವರಿ ಬಂಕರ್ ಮಂಜೂರು
ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ರೇಖೆಯ ಬಳಿ ಪಾಕ್ ಸೇನೆ ಪದೇ ಪದೆ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪೂಂಚ್...
ಜಮ್ಮು: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ರೇಖೆಯ ಬಳಿ ಪಾಕ್ ಸೇನೆ ಪದೇ ಪದೆ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪೂಂಚ್ ಮತ್ತು ರಜೌರಿ ಜಿಲ್ಲೆಗಳಿಗೆ ತಲಾ 200 ಹೆಚ್ಚುವರಿ ಬಂಕರ್ ಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಂಜೂರು ಮಾಡಿದೆ.
ಈ ಬಂಕರ್ ಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಅನುದಾನ ಲಭ್ಯವಾಗಲಿದ್ದು, ಶೀಘ್ರಗತಿಯಲ್ಲಿ ಬಂಕರ್ ಗಳ ನಿರ್ಮಾಣಕಾರ್ಯ ಆರಂಭಿಸುವಂತೆ ಸರ್ಕಾರ ನಿರ್ದೇಶಿಸಿದೆ. ಹೀಗಾಗಿ ಇನ್ನೊಂದು ತಿಂಗಳಲ್ಲಿ ಬಂಕರ್ ಗಳ ನಿರ್ಮಾಣ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ.
ಗಡಿಯಲ್ಲಿ ಬಂಕರ್ ಗಳ ನಿರ್ಮಾಣ ಪಾಕ್ ಶೆಲ್ ದಾಳಿಗೆ ಪರಿಣಾಮಕಾರಿ ಜವಾಬು ನೀಡಿದಂತಾಗಲಿದೆ. ಶೆಲ್ ದಾಳಿಯ ಸಂದರ್ಭದಲ್ಲಿ ರಕ್ಷಣೆ ಪಡೆಯಲು ಅನುಕೂಲವಾಗಲಿದೆ ಎಂದು ರಜೌರಿ ಹಾಗೂ ಪೂಂಚ್ ನಿವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.