ಪಿಎಂ ನರೇಂದ್ರ ಮೋದಿ 
ದೇಶ

ವಿರೋಧ ಪಕ್ಷಗಳ ಕ್ಷುಲ್ಲಕ ರಾಜಕೀಯದಿಂದ ಶತ್ರುಗಳಿಗೆ ಅನುಕೂಲವಾಗುತ್ತಿದೆ; ಪ್ರಧಾನಿ ಮೋದಿ

ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳ ಕ್ಷುಲ್ಲಕ...

ವಿಶಾಖಪಟ್ನಂ: ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳ ಕ್ಷುಲ್ಲಕ ರಾಜಕಾರಣದಲ್ಲಿ ತೊಡಗಿಕೊಂಡಿರುವುದರಿಂದ ಶತ್ರುಗಳಿಗೆ ಲಾಭವಾಗಿದ್ದು ದೇಶದ ಬೆಳವಣಿಗೆ ಕಡೆ ಗಮನ ಹರಿಸುವ ಬದಲು ತಮ್ಮನ್ನು ಅಧಿಕಾರದಿಂದ ಕಿತ್ತೊಗೆಯುವುದು ಒಂದೇ ವಿರೋಧ ಪಕ್ಷಗಳ ಚುನಾವಣಾ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ.
ಇಡೀ ವಿಶ್ವವೇ ಪಾಕಿಸ್ತಾನದಿಂದ ಭಯೋತ್ಪಾದನೆ ಬಗ್ಗೆ ಉತ್ತರ ಬಯಸುತ್ತಿರುವಾಗ ಭಾರತದಲ್ಲಿ ಕೆಲವರು ಈ ಹೊತ್ತಿನಲ್ಲಿ ದೇಶದ ಭದ್ರತಾ ಪಡೆಯನ್ನು ದುರ್ಬಲಗೊಳಿಸಲು ಈ ನೆಲದಲ್ಲಿರುವವರೇ ಕೆಲವರು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ವಿಶಾಖಪಟ್ಣಂನಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದರು.
ನೀವು ಏನು ಮಾತನಾಡುತ್ತಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು, ನಿಮ್ಮ ಮಾತುಗಳನ್ನು ಪಾಕಿಸ್ತಾನ ಸಂಸತ್ತಿನಲ್ಲಿ ಶ್ಲಾಘಿಸಲಾಗಿದೆ ಮತ್ತು ಅವರು ಅದನ್ನು ಭಾರತವನ್ನು ಗುರಿಯಾಗಿಟ್ಟುಕೊಂಡು ಮಾತನಾಡುತ್ತಿದ್ದಾರೆ. ಇಲ್ಲಿ ಪಕ್ಷಗಳು ಕಲಬೆರಕೆಯ ಕ್ಷುಲ್ಲಕ ರಾಜಕೀಯದಲ್ಲಿ ತೊಡಗಿದ್ದು ಅದು ದೇಶದ ಶತ್ರುಗಳಿಗೆ ಸುಲಭ ಮಾಡಿಕೊಡುತ್ತಿದೆ. ಮೋದಿಯನ್ನು ದ್ವೇಷಿಸುವ ಹೆಸರಿನಲ್ಲಿ ದೇಶವನ್ನು ದ್ವೇಷಿಸುತ್ತಿದ್ದಾರೆ ಎಂದು ಮೋದಿ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT