ಗಡಿಯಲ್ಲಿ ಮುಂದುವರೆದ ಪಾಕ್ ಸೇನೆ ಪುಂಡಾಟ: ಶೆಲ್ ದಾಳಿಗೆ 9 ತಿಂಗಳ ಹಸುಗೂಸು ಸೇರಿ ಮೂವರ ದುರ್ಮರಣ
ಪಾಕ್ ಆಕ್ರಮಿತ ಕಾಶ್ಮೀರದ ಪೂಂಚ್ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದಾಗಿ 9 ತಿಂಗಳ ಮಗು ಹಾಗೂ ಅದರ ತಾಯಿ ಸೇರಿ ಒಂದೇ ...
ಪೂಂಚ್ (ಜಮ್ಮು ಕಾಶ್ಮೀರ): ಪಾಕ್ ಆಕ್ರಮಿತ ಕಾಶ್ಮೀರದ ಪೂಂಚ್ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದಾಗಿ 9 ತಿಂಗಳ ಮಗು ಹಾಗೂ ಅದರ ತಾಯಿ ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ,
ಪೂಂಚ್ ನಲ್ಲಿ ನಡೆದ ಗುಂಡಿನ ದಾಳಿಗೆ ಮತ್ತೊಬ್ಬರಿಗೆ ತೀವ್ರತರವಾದ ಗಾಯಗಳಾಗಿವೆ, ರುಬಾನಾ ಕೋಸರ್ ಆಕೆಯ 5 ವರ್ಷದ ಮಗ ಪಜಾನ್ ಹಾಗು 9 ತಿಂಗಳ ಹೆಣ್ಣು ಮಗು ಶಬನಂ ಸಾವನ್ನಪ್ಪಿದ್ದಾರೆ,
ಪಾಕಿಸ್ತಾನ ಸೇನೆ ಈ ಪ್ರದೇಶದ ನಾಗರಿಕರನ್ನು ಗುರಿಯಾಗಿಸಿಕೊಂಡು ನಿನ್ನೆ ರಾತ್ರೀಯಿಡಿ ಭಾರೀ ಶೆಲ್ ದಾಳಿ ನಡೆಸಿದೆ ಎಂದು ತಿಳಿಸಿರುವ ಪೊಲೀಸರು ಭಾರತೀಯ ಭದ್ರತಾ ಪಡೆ ಕೂಡ ತಕ್ತ ಉತ್ತರ ನೀಡಿದೆ.
ಗಡಿ ನಿಯಂತ್ರಣ ರೇಖೆ ಬಳಿಯಿರುವ ಸಲ್ಲೋತ್ರಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿತ್ತು, ಇದರಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.