ಮುಂಬೈ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲಿನ ವೈಮಾನಿಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದರು.
ಇಂದು ಧುಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದರು.
ನಾನು 2004ರಿಂದ ರಾಜಕೀಯದಲ್ಲಿದ್ದೇನೆ. ನಾನು ಒಂದೇ ಒಂದು ಸುಳ್ಳು ಭರವಸೆ ನೀಡಿದ್ದನ್ನು ತೋರಿಸಿ ಎಂದು ರಾಹುಲ್ ಗಾಂಧಿ ಮೋದಿಯವರಿಗೆ ಸವಾಲು ಹಾಕಿದರು.
ನಾಲ್ಕು ವರ್ಷದಿಂದ ರೈತರಿಗಾಗಿ ಏನೂ ಮಾಡದ ಮೋದಿ ಈಗ ಚುನಾವಣೆ ಸಮಯದಲ್ಲಿ ದಿನಕ್ಕೆ ಕೇವಲ 17 ರುಪಾಯಿ ನೀಡುತ್ತಿದ್ದಾರೆ. ಆದರೆ 15 ಉದ್ಯಮಿಗಳ 3.5 ಲಕ್ಷ ಕೋಟಿ ರುಪಾಯಿ ಮನ್ನಾ ಮಾಡಿದ್ದಾರೆ ಎಂದು ದೂರಿದರು.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಯುವಕರಿಗೆ ಕನಿಷ್ಠ ಆದಾಯ ಮತ್ತು ಉದ್ಯೋಗ ಖಾತರಿ ನೀಡಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics