ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ ಭರ್ಜರಿ ಸ್ಟೇಪ್: ವಿಡಿಯೋ ವೈರಲ್!
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿಯ ಸ್ಥಳೀಯ ಮಹಿಳೆಯರೊಂದಿಗೆ ಭರ್ಜರಿ ಸ್ಟೇಪ್ ಹಾಕಿದ್ದಾರೆ. ರಾಹುಲ್ ಗಾಂಧಿ ಮಾಡಿರುವ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಂಚಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿಯ ಸ್ಥಳೀಯ ಮಹಿಳೆಯರೊಂದಿಗೆ ಭರ್ಜರಿ ಸ್ಟೇಪ್ ಹಾಕಿದ್ದಾರೆ. ರಾಹುಲ್ ಗಾಂಧಿ ಮಾಡಿರುವ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ, ಜಾರ್ಖಂಡ್ ಕಲೆಯನ್ನು ಬಿಂಬಿಸುವ ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕುವ ಮೂಲಕ ರಾಹುಲ್ ಅಲ್ಲಿದ್ದವರನ್ನು ರಂಜಿಸಿದ್ದಾರೆ.
ರಾಹುಲ್ ಗಾಂಧಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ರಾಹುಲ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಎಎನ್ ಐ ಸುದ್ದಿ ಸಂಸ್ಥೆ ಹಾಕಿರುವ ಈ ವಿಡಿಯೋವನ್ನು ನೂರಾರು ಮಂದಿ ರೀಟ್ವಿಟ್ ಮಾಡಿದ್ದರೆ, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.