ಸಂಗ್ರಹ ಚಿತ್ರ 
ದೇಶ

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯ, ಆಸ್ಪತ್ರೆಗೆ ದಾಖಲು

ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದ.

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದ.
ಮೂಲಗಳ ಪ್ರಕಾರ ಪರಿಕ್ಕರ್ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಕ್ಕರ್ ಅವರು ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ ಪರಿಕ್ಕರ್ ಅವರನ್ನು ಇಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಸಂಜೆ ವೇಳೆಗೆ ಆಸ್ಪತ್ರೆ ವೈದ್ಯರು ಪರಿಕ್ಕರ್ ಅವರ ಆರೋಗ್ಯದ ಕುರಿತು ಹೇಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಕಳೆದ 2018ರ ಫೆಬ್ರವರಿಯಲ್ಲಿ ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವುದು ಬಹಿರಂಗವಾಗಿತ್ತು. ಆರಂಭದಲ್ಲಿ ಗೋವಾ, ದೆಹಲಿ ಮತ್ತು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಿಕ್ಕರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನ್ಯೂಯಾರ್ಕ್ ರವಾನೆ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!