ಹಂದ್ವಾರ ಎನ್ ಕೌಂಟರ್ 
ದೇಶ

ಹಂದ್ವಾರ ಎನ್ ಕೌಂಟರ್: ಇಬ್ಬರು ಉಗ್ರ ಹೆಡೆಮುರಿ ಕಟ್ಟಿದ ಸೇನೆ, ಭದ್ರತಾ ಪಡೆಯ 5 ಮಂದಿ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಸೇನಾಪಡೆಗಳು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಸಾವಿಗೀಡಾದ ಉಗ್ರ ಸಂಖ್ಯೆ 2ಕ್ಕೇರಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಸೇನಾಪಡೆಗಳು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಸಾವಿಗೀಡಾದ ಉಗ್ರ ಸಂಖ್ಯೆ 2ಕ್ಕೇರಿದೆ.
ಕಳೆದ ಶುಕ್ರವಾರ ರಾತ್ರಿಯಿಂದ ಆರಂಭವಾಗಿದ್ದ ಗುಂಡಿನ ಕಾಳಗ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ ರಾತ್ರಿ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿತ್ತು. ಹಂದ್ವಾರದ ಬಾಬಾಗುಂಡ್ ಗ್ರಾಮದಲ್ಲಿನ ಮೂರು ಮನೆಗಳಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಕಾಶ್ಮೀರ ಪೊಲೀಸರು ಹಾಗೂ ಸಿಆರ್ ಪಿಎಫ್ ಯೋಧರು ಮನೆಗಳನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದು, ಕಳೆದ 60 ಗಂಟೆಗಳಲ್ಲಿ ಉಗ್ರರ ಗುಂಡಿಗೆ ಇಬ್ಬರು ಸಿಆರ್ ಪಿಎಫ್ ಯೋಧರು, ಇಬ್ಬರು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು ಜ್ಞ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಓರ್ವ ನಾಗರಿಕನಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ. ಇನ್ನು ಉಗ್ರರು ಅಡಗಿದ್ದ ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಮನೆಗಳು ಭಾಗಶಃ ಹಾನಿಯಾಗಿದೆ. ಅಲ್ಲದೆ ಮನೆ ಧ್ವಂಸವಾಗಿದ್ದು ಉಗ್ರನ ಶವ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯ ಆರಂಭವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT