ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರಕ್ಕೆ ಫುಲ್ ಮಾರ್ಕ್ಸ್: ಹಾಡಿ ಹೊಗಳಿದ ಚಿದಂಬರಂ !
ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಸಚಿವ ಪಿ.ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಹಾಡಿಹೊಗಳಿದ್ದಾರೆ.
ಚೆನ್ನೈ: ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಸಚಿವ ಪಿ.ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಹಾಡಿಹೊಗಳಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ಹಮ್ಮಿಕೊಂಡಿರುವ ಗಂಗಾ ಸ್ವಚ್ಛತಾ ಅಭಿಯಾನ, ಹೆದ್ದಾರಿಗಳ ನಿರ್ಮಾಣ ಹಾಗೂ ಆಧಾರ್ ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರಗಳನ್ನು ಪ್ರಶಂಸಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರವನ್ನು ಪ್ರಶಂಸಿಸಿರುವ ಕಾಂಗ್ರೆಸ್ ನಾಯಕ ಚಿದಂಬರಂ ಧೃಡ ನಿರ್ಧಾರ ಹಾಗೂ ಪರಿಶ್ರಮದಿಂದ ಗಂಗಾ ನದಿ ಶುದ್ಧಗೊಂಡಿದೆ. ಈ ವಿಚಾರವಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ.,
ಈಗಾಗಲೇ ಎನ್ ಡಿ ಎ ಸರ್ಕಾರ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯಕ್ರಮವೂ ಯಶಸ್ಸು ಕಂಡಿದೆ. ಇಷ್ಟೇ ಅಲ್ಲದೆ ಆಧಾರ್ ಜಾರಿಗೊಳಿಸಿ ಇದನ್ನು ಮತ್ತಷ್ಟು ಬಲಪಡಿಸಿದೆ ಎಂದು ತಿಳಿಸಿದ್ದಾರೆ.
ಆದರೆ ನೋಟು ಅಮಾನ್ಯೀಕರಣ ನಿರ್ದಾರದಿಂದಾಗಿ ನನಗೆ ತುಂಬಾ ಕೋಪ ಬಂದಿದೆ,. ಜೊತೆಗೆ ಜಿಎಸ್ ಟಿ ಎಂಬುದು ಅತಿದೊಡ್ಡ ತಪ್ಪು ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.