ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ 
ದೇಶ

ಸುಳ್ಳು ಹೇಳಲು ನಾಚಿಕೆಯಾಗದೇ ಮೋದಿಜೀ: ರಾಹುಲ್ ಕಿಡಿ

ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಾಸ್ತ್ರ ತಯಾರಿಕಾ ಘಟಕ ಸ್ಥಾಪನೆಗೆ ಅಡಿಪಾಯ ಹಾಕುವ ವಿಚಾರದಲ್ಲಿ ಪ್ರಧಾನಿ ಮೋದಿ ಜನರನ್ನು ದಿಕ್ಕು ತಪ್ಪಿಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಾಸ್ತ್ರ ತಯಾರಿಕಾ ಘಟಕ ಸ್ಥಾಪನೆಗೆ ಅಡಿಪಾಯ ಹಾಕುವ ವಿಚಾರದಲ್ಲಿ  ಪ್ರಧಾನಿ  ಮೋದಿ ಜನರನ್ನು ದಿಕ್ಕು ತಪ್ಪಿಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈಗಾಗಲೇ ಈ ಘಟಕಕ್ಕೆ  ಕಳೆದ 2010ರಲ್ಲೇ ತಾವು  ಅಡಿಪಾಯ ಹಾಕಿದ್ದು ಪ್ರಧಾನಿ ಮೋದಿ ಅವರು ಅವರು ತಾವೇ ಇದಕ್ಕೆ ಅಡಿಪಾಯ ಹಾಕುತ್ತಿರುವುದಾಗಿ ಹೇಳುವ ಮೂಲಕ ಜನರಿಗೆ ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ  ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ ಅವರು, ಪ್ರಿಯ ಪ್ರಧಾನ ಮಂತ್ರಿ ಜೀ, ಈಗಾಗಲೇ 2010 ರಲ್ಲಿ ಕಾರ್ಖಾನೆಗೆ ನಾನು ಅಡಿಪಾಯ ಹಾಕಿದ್ದೇನೆ ಎಂಬುದನ್ನು ಮರೆತು ಬಿಟ್ಟಿದ್ದೀರಾ.. ಸಣ್ಣ ಶಸ್ತ್ರಾಸ್ತ್ರಗಳ ಉತ್ಪಾದನೆಯು ಕಳೆದ ಹಲವಾರು ವರ್ಷಗಳಿಂದ ಕಾರ್ಖಾನೆಯಲ್ಲಿ ನಡೆಯುತ್ತಿದೆ ಎಂಬುದು ನಿಮಗೆ ಗೊತ್ತಿಲ್ಲವೇ ಎಂದು ರಾಹುಲ್ ಕಿಡಿ ಕಾರಿದ್ದಾರೆ.
ನೀವು ಭಾನುವಾರದಂದು ಅಮೇಥಿಗೆ ಭೇಟಿ ನೀಡಿದ್ದೀರಿ ಮತ್ತು ನಿಮ್ಮ ಅಭ್ಯಾಸ ಸುಳ್ಳು ಹೇಳುವುದು ಮತ್ತೆ ಅದನ್ನೇ ಸಾಬೀತು ಪಡಿಸಲು ಹೊರಟ ನಿಮಗೆ ನಾಚಿಕೆ ಆಗುವುದಿಲ್ಲವೇ.. ಎಂದು ಖಾರವಾಗಿ ರಾಹುಲ್ ಪ್ರಶ್ನೆ ಮಾಡಿದ್ದಾರೆ.
ಇನ್ನು ನಿನ್ನೆ ಅಮೇಥಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಅವರು, ಹಿಂದಿನ ಸರ್ಕಾರಗಳ ಕಾರಣದಿಂದಾಗಿ ಅಮೇಥಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಆರೋಪಿಸಿದ್ದರು. ಅಂತೆಯೇ  ಈ ಕೆಲಸವನ್ನು ಎಂಟು ರಿಂದ ಒಂಬತ್ತು ವರ್ಷಗಳ ಹಿಂದೆಯೇ ಮಾಡಬೇಕಿತ್ತು" ಎಂದು ಮೋದಿ ಟೀಕಿಸಿದ್ದರು.  ಇದಕ್ಕೆ ಪ್ರತಿಯಾಗಿ ರಾಹಲ್ ಅವರು ಮೋದಿಗೆ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕವೇ ಟಾಂಗ್ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ