ದೇಶ

ದೆಹಲಿಯ ಸಿಜಿಒ ಕಾಂಪ್ಲೆಕ್ಸ್ ನಲ್ಲಿ ಬೆಂಕಿ: ಸಿಐಎಸ್ಎಫ್ ಸಬ್ ಇನ್ಸ್ ಪೆಕ್ಟರ್ ಸಾವು

Srinivas Rao BV
ದೆಹಲಿಯ ಸಿಜಿಒ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಸಿಐಎಸ್ಎಫ್ ನ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ.
ದಕ್ಷಿಣ ದೆಹಲಿಯ ಸಿಜಿಒ ಕಾಂಪ್ಲೆಕ್ಸ್ ನಲ್ಲಿ ಪ್ರಮುಖ ಸರ್ಕಾರಿ ಕಚೇರಿಗಳಿದ್ದು, ಸಾಮಾಜಿಕ ನ್ಯಾಯ ಇಲಾಖೆಯ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 8:34 ರ ವೇಳೆಗೆ ಪಂಡಿತ್ ದೀನ ದಯಾಳ ಅಂತ್ಯೋದಯ ಭವನದ 5 ನೇ ಮಹಡಿಯಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರ ಬಗ್ಗೆ ಅಗ್ನಿಶಾಮಕ ದಳ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿವೆ. ಇತ್ತೀಚಿನ ವರದಿಯ ಪ್ರಕಾರ ಬೆಂಕಿಯನ್ನು ತಹಬದಿಗೆ ತರಲಾಗಿದ್ದು, ಘಟನೆಯಿಂದ ಉಂಟಾದ ನಷ್ಟವನ್ನು ಅಂದಾಜಿಸಲಾಗುತ್ತಿದೆ. 
ಅಗ್ನಿ ಅವಘಡದಲ್ಲಿ ಸಿಲುಕಿದ್ದ ಸಿಐಎಸ್ಎಫ್ ಸಬ್ ಇನ್ಸ್ ಪೆಕ್ಟರ್ ನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
SCROLL FOR NEXT