ಪಾಕಿಸ್ತಾನಕ್ಕೆ ಅಮೆರಿಕದಿಂದ ಮತ್ತೊಂದು ಹೊಡೆತ: ವೀಸಾ ಅವಧಿ ಕಡಿತ!
ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಡೆತದ ಮೇಲೆ ಹೊಡೆತ ಬೀಳುತ್ತಿದ್ದು, ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಈಗ ಪಾಕ್ ಗೆ ಮತ್ತೊಂದು ಹೊಡೆತ ನೀಡಿದೆ.
ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಡೆತದ ಮೇಲೆ ಹೊಡೆತ ಬೀಳುತ್ತಿದ್ದು, ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಈಗ ಪಾಕ್ ಗೆ ಮತ್ತೊಂದು ಹೊಡೆತ ನೀಡಿದೆ.
ಪಾಕಿಸ್ತಾನದ ನಾಗರಿಕರಿಗೆ ನೀಡಲಾಗುವ ವೀಸಾ ಅವಧಿಯನ್ನು 5 ವರ್ಷದಿಂದ ಕೇವಲ 3 ತಿಂಗಳಿಗೆ ಇಳಿಕೆ ಮಾಡಲಾಗಿದೆ. ಈ ಹೊಸ ನಿಯಮ ಪಾಕಿಸ್ತಾನದ ಪೌರತ್ವ ಹೊಂದಿರುವ ನಾಗರಿಕರಿಗಷ್ಟೇ ಅಲ್ಲದೇ ಪಾಕಿಸ್ತಾನದ ಪತ್ರಕರ್ತರಿಗೂ ಅನ್ವಯವಾಗಲಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ವಕ್ತಾರರು ತಿಳಿಸಿದ್ದಾರೆ.
ಇದೇ ವೇಳೆ ಪಾಕಿಸ್ತಾನದ ವೀಸಾ ಅರ್ಜಿಯ ಶುಲ್ಕವನ್ನೂ ಅಮೆರಿಕ 160 ಡಾಲರ್ ನಿಂದ 192 ಏರಿಕೆ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.