ಸಂಗ್ರಹ ಚಿತ್ರ 
ದೇಶ

ಮಾಧ್ಯಮಗಳು ಅಯೋಧ್ಯೆ ಸಂಧಾನ ಪ್ರಕ್ರಿಯೆ ವರದಿ ಮಾಡುವಂತಿಲ್ಲ, ಫೈಜಾಬಾದ್ ನಲ್ಲೇ ಸಂಧಾನ: 'ಸುಪ್ರೀಂ' ಷರತ್ತುಗಳು!

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕವೇ ಸಮಸ್ಯೆ ಇತ್ಯರ್ಥ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಸಂಧಾನ ಪ್ರಕ್ರಿಯೆ ಸಂಬಂಧ ಹಲವು ಷರತ್ತುಗಳನ್ನು ವಿಧಿಸಿದೆ.

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕವೇ ಸಮಸ್ಯೆ ಇತ್ಯರ್ಥ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಸಂಧಾನ ಪ್ರಕ್ರಿಯೆ ಸಂಬಂಧ ಹಲವು ಷರತ್ತುಗಳನ್ನು ವಿಧಿಸಿದೆ.
ಪ್ರಮುಖವಾಗಿ ಯಾವುದೇ ಕಾರಣಕ್ಕೂ ಸಂಧಾನ ಪ್ರಕ್ರಿಯೆಯನ್ನು ಮಾಧ್ಯಮಗಳು ವರದಿ ಮಾಡಬಾರದು ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು, ಈ ಸಂಬಂಧ ಸಂಧಾನಕಾರರು ಎಚ್ಚರದಿಂದರಿಬೇಕು ಎಂದು ಹೇಳಿದೆ. ಅಲ್ಲದೆ ಸಂಧಾನ ಪ್ರಕ್ರಿಯೆಯ ಎಲ್ಲ ಮಾಹಿತಿಗಳೂ ಗೌಪ್ಯವಾಗಿರಬೇಕಿದ್ದು, ಈ ಕುರಿತು ಸಂಪೂರ್ಣ ಜವಾಬ್ದಾರಿ ಸಂಧಾನ ಸಮಿತಿಯದ್ದೇ ಆಗಿರುತ್ತದೆ ಎಂದೂ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಸಂವಿಧಾನಿಕ ಪೀಠ ಹೇಳಿದೆ.
ಅಲ್ಲದೆ ಸಂಧಾನ ಸಮಿತಿಗೆ ಸಂಧಾನಕ್ಕಾಗಿ ಪೀಠ 8 ವಾರಗಳ ಕಾಲಾವಕಾಶ ನೀಡಿದ್ದು, ಇಂದಿನಿಂದ ಒಂದು ವಾರದೊಳಗೆ ಸಂಧಾನ ಪ್ರಕ್ರಿಯೆ ಆರಂಭಿಸಬೇಕು, 4 ವಾರಗಳೊಳಗೆ ಕೋರ್ಟ್ ಸಂಧಾನ ಪ್ರಕ್ರಿಯೆಯ ಪ್ರಗತಿ ವರದಿ ಸಲ್ಲಿಕೆ ಮಾಡಬೇಕು ಮತ್ತು 8 ವಾರಗಳೊಳಗೆ ಇಡೀ ಸಂಧಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದೂ ಪೀಠ ಸಂಧಾನ ಸಮಿತಿಗೆ ಸೂಚಿಸಿದೆ.
ವಿವಾದಿತ ಪ್ರದೇಶ ಫೈಜಾಬಾದ್ ನಲ್ಲೇ ಸಂಧಾನ
ಇನ್ನು ಇಡೀ ಪ್ರಕರಣದ ಕೇಂದ್ರ ಬಿಂದು ಮತ್ತು ವಿವಾದಿತ ಪ್ರದೇಶವಿರುವ ಫೈಜಾಬಾದ್ ನಲ್ಲೇ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದೂ ಪೀಠ ಹೇಳಿದ್ದು, ಸಂಪೂರ್ಣ ಸಂಧಾನ ಪ್ರಕ್ರಿಯೆಯನ್ನು ಕ್ಯಾಮೆರಾದಲ್ಲಿ ದಾಖಲಿಸಬೇಕು ಎಂದು ಹೇಳಿದೆ.
ಒಟ್ಟಾರೆ ದಶಕಗಳಿಂದಲೂ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿರುವ ಅಯೋಧ್ಯೆ ಭೂವಿವಾದ ಪ್ರಕರಣ ಇದೀಗ ನಿರ್ಣಾಯಕ  ಹಂತ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ