ದೇಶ

ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ಒಟ್ಟಾಗಿ ಕೆಲಸ ಮಾಡಬೇಕು: ರವಿಶಂಕರ್ ಗುರೂಜಿ

Lingaraj Badiger
ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ನಾವು ಎಲ್ಲಾ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಂಧಾನ ಸಮಿತಿಯ ಸದಸ್ಯ ಶ್ರೀ ರವಿಶಂಕರ್ ಗುರೂಜಿ ಅವರು ಶುಕ್ರವಾರ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ಇಂದು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಫ್ಎಂಐ ಖಲೀಫುಲ್ಲಾ ನೇತೃತ್ವದಲ್ಲಿ ಸಂಧಾನ ಸಮಿತಿ ರಚಿಸಿದ್ದು, ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಪಂಚು ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ರವಿಂಶಕರ್ ಗೂರುಜಿ ಅವರು, ನಾನು ಈಗಷ್ಟೇ ಈ ಸುದ್ದಿಯ ಬಗ್ಗೆ ಕೇಳಿದೆ. ನನ್ನನ್ನೂ ಸಂಧಾನ ಸಮಿತಿಯಲ್ಲಿ ನೇಮಿಸಿದ್ದು ಸಂತೋಷ. ಸಂಧಾನ ನಡೆಸಿಯೇ ಸಮಸ್ಯೆ ಬಗೆಹರಿಸುವುದು ದೇಶದ ಒಳಿತಿನ ದೃಷ್ಟಿಯಿಂದಲೂ ಉತ್ತಮ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರು ಹೇಳಿದ್ದಾರೆ.
ಸಮಾಜದಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಮೂಲಕ ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದಿದ್ದಾರೆ.
ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ನಮ್ಮ ಕನಸುಗಳನ್ನು ಸಕಾರಗೊಳಿಸಬೇಕು ಎಂದು ರವಿಶಂಕರ್ ಗುರೂಜಿ ಹೇಳಿದ್ದಾರೆ.
SCROLL FOR NEXT