ನರೇಂದ್ರ ಮೋದಿ 
ದೇಶ

ಕಾಶ್ಮೀರಿಗಳ ಮೇಲೆ ಹಲ್ಲೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಪ್ರಧಾನಿ ಮೋದಿ ಮನವಿ

ಪುಲ್ವಾಮಾ ಉಗ್ರ ದಾಳಿಯ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು....

ಲಖನೌ: ಪುಲ್ವಾಮಾ  ಉಗ್ರ ದಾಳಿಯ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದು, ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಇಂದು ಕಾನ್ಪುರದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇತ್ತೀಚಿಗೆ ಲಖನೌದಲ್ಲಿ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದವರು ವಿಚಿತ್ರ ಜನರು. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕ ಎಂದರು.
ದೇಶದಲ್ಲಿ ಏಕತೆಯ ವಾತಾವರಣವನ್ನು ಕಾಪಾಡುವುದು ಬಹಳ ಮುಖ್ಯ. ಹೀಗಾಗಿ ದೇಶದಲ್ಲಿ ಕಾಶ್ಮೀರಿಗಳ ಮೇಲೆ ಈ ರೀತಿಯ ಹಲ್ಲೆ, ಹಿಂಸೆ, ದಬ್ಟಾಳಿಕೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಇತರೆ ರಾಜ್ಯಗಳಿಗೂ ಮನವಿ ಮಾಡುತ್ತೇನೆ ಎಂದರು.
ಇದೇ ವೇಳೆ ಲಖನೌ ಪ್ರಕರಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ತತ್‌ಕ್ಷಣ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಮೋದಿ ಪ್ರಶಂಸಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT