ಜವಾಹರ್ ಚವ್ಡಾ ಅವರು ಸ್ಪೀಕರ್ ಗೆ ರಾಜೀನಾಮೆ ನೀಡುತ್ತಿರುವುದು 
ದೇಶ

ಶಾಸಕ ಸ್ಥಾನಕ್ಕೆ ಗುಜರಾತ್ ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ರಾಜೀನಾಮೆ

ಗುಜರಾತ್ ನಲ್ಲಿ ಮತ್ತೊಂದು ಕಾಂಗ್ರೆಸ್ ವಿಕೆಟ್ ಪತನವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ಚವ್ಡಾ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ....

ಅಹಮದಾಬಾದ್: ಗುಜರಾತ್ ನಲ್ಲಿ ಮತ್ತೊಂದು ಕಾಂಗ್ರೆಸ್ ವಿಕೆಟ್ ಪತನವಾಗಿದ್ದು,  ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ಚವ್ಡಾ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಳೆದ ಕೆಲವು ತಿಂಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಂತಾಗಿದೆ.
ಗುಜರಾತ್ ನಲ್ಲಿ ಮಾರ್ಚ್ 12ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿಗದಿಯಾಗಿದ್ದು, ಮಹತ್ವದ ಸಭೆಗೂ ಮುನ್ನವೇ ಚವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮನವದರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಚವ್ಡಾ ಅವರು ಇಂದು ಗುಜರಾತ್ ವಿಧಾನಸಭೆ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಚವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತ್ರಿವೇದಿ ಅವರು ಹೇಳಿದ್ದಾರೆ.
ಕಳೆದ ಜುಲೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಕುನ್ವರ್ಜಿ ಬವಲಿಯಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ಕಳೆದ ತಿಂಗಳು ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಆಶಾ ಪಟೇಲ್ ಅವರು ಸಹ ರಾಜೀನಾಮೆ ನೀಡಿ, ಆಡಳಿತರೂಢ ಬಿಜೆಪಿ ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ