ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಚುನಾವಣಾ ಪ್ರಚಾರಕ್ಕೆ ಸೇನೆ, ಸೈನಿಕರ ಚಿತ್ರ ಬಳಸುವಂತಿಲ್ಲ- ಆಯೋಗ

ಚುನಾವಣಾ ಪ್ರಚಾರಕ್ಕೆ ಸೇನೆ ಹಾಗೂ ಸೈನಿಕರ ಚಿತ್ರಗಳನ್ನು ರಾಜಕೀಯ ಪಕ್ಷಗಳು, ಮುಖಂಡರು ಬಳಸಿಕೊಳ್ಳುವಂತಿಲ್ಲ ಎಂದು ಚುನಾವಣಾ ಆಯೋಗ ಇಂದು ಮಹತ್ವದ ಆದೇಶ ಹೊರಡಿಸಿದೆ.

ಸಂಗ್ರಹ ಚಿತ್ರ
Nagaraja AB
Updated On : 10 Mar 2019, 1:29 am

ನವದೆಹಲಿ: ಚುನಾವಣಾ ಪ್ರಚಾರಕ್ಕೆ ಸೇನೆ ಹಾಗೂ ಸೈನಿಕರ  ಚಿತ್ರಗಳನ್ನು ರಾಜಕೀಯ ಪಕ್ಷಗಳು, ಮುಖಂಡರು ಬಳಸಿಕೊಳ್ಳುವಂತಿಲ್ಲ ಎಂದು ಚುನಾವಣಾ ಆಯೋಗ ಇಂದು  ಮಹತ್ವದ ಆದೇಶ ಹೊರಡಿಸಿದೆ.

ಭದ್ರತಾ ಪಡೆಗಳು  ರಾಜಕೀಯ ವ್ಯವಸ್ಥೆ, ಭದ್ರತೆಯ ರಕ್ಷಕರಾಗಿದ್ದು, ಆಧುನಿಕ ಪ್ರಜಾಪ್ರಭುತ್ವದಲ್ಲಿ ತಟಸ್ಥ ಪಾಲುದಾರರಾಗಿದ್ದಾರೆ. ಆದ್ದರಿಂದಾಗಿ  ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಯಾವುದೇ ಕಾರಣಕ್ಕೂ ಪ್ರಚಾರದ ಸಂದರ್ಭದಲ್ಲಿ ಸೇನೆಯ ಹಾಗೂ ಸೈನಿಕರ ಚಿತ್ರಗಳನ್ನು ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚುನಾವಣಾ ಪ್ರಚಾರ ಅಥವಾ ಜಾಹಿರಾತುಗಳಲ್ಲಿ ಸೇನೆಯ, ಸೈನಿಕರ ಚಿತ್ರಗಳನ್ನು ಬಳಸದಂತೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಮುಖಂಡರು ಹಾಗೂ ಅಭ್ಯರ್ಥಿಗಳಿಗೆ  ಸಲಹೆ ನೀಡುವಂತೆ  ಚುನಾವಣಾ ಆಯೋಗ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement