ಕಾಂಗ್ರೆಸ್ ಪಕ್ಷ ಅಹಂಕಾರಿ, ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ: ಕೇಜ್ರಿವಾಲ್
ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿರುವ ಕಾಂಗ್ರೆಸ್ ವಿರುದ್ಧ ಕೇಜ್ರಿವಾಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಅಹಂಕಾರದಿಂದ ವರ್ತಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಕೇಜ್ರಿವಾಲ್: ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿರುವ ಕಾಂಗ್ರೆಸ್ ವಿರುದ್ಧ ಕೇಜ್ರಿವಾಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಅಹಂಕಾರದಿಂದ ವರ್ತಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಅಹಂಕಾರದಿಂದ ವರ್ತಿಸುತ್ತಿರುವ ಕಾಂಗ್ರೆಸ್ ನ ಎಲ್ಲಾ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಗೆ ಮನವಿ ಮಾಡಿದ್ದೆವು ಆದರೆ ಕಾಂಗ್ರೆಸ್ ಅಹಂಕಾರದಿಂದ ವರ್ತಿಸಿದೆ. ದೆಹಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆಮ್ ಆದ್ಮಿ ಪಕ್ಷದ ನಡುವೆ ಮತ ವಿಭಜನತೆಯಾಗದಂತೆ ಎಚ್ಚರವಹಿಸಿ ಎಂದು ಜನತೆಗೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಸಾಮರ್ಥ್ಯ ಇರುವುದು ಆಮ್ ಅದ್ಮಿ ಪಕ್ಷಕ್ಕೆ ಮಾತ್ರ. ಆದ್ದರಿಂದ ಆಮ್ ಆದ್ಮಿ ಪಕ್ಷಕ್ಕೇ ಮತ ನೀಡಿ ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.