ಸಂಗ್ರಹ ಚಿತ್ರ 
ದೇಶ

ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ: ಕಾಂಗ್ರೆಸ್ ನಾಯಕಿ ವಿಜಯಶಾಂತಿ

ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.
ತೆಲಂಗಾಣದ ಶಂಶಾಬಾದ್​ನಲ್ಲಿ ಇಂದು ಸಂಜೆ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ ವಿಜಯಶಾಂತಿ ಈ ರೀತಿಯ ವಿವಾದಕ್ಕೀಡಾಗುವ ಹೇಳಿಕೆಯನ್ನು ನೀಡಿದ್ದಾರೆ.
'ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಇನ್ನು ವಿಜಯ್ ಶಾಂತಿ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ವಿಜಯಶಾಂತಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ