ಪ್ರಧಾನಿ ಮೋದಿ 
ದೇಶ

ಪ್ರಜಾಸತ್ತೆ ಮಹಾ ಹಬ್ಬ : ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

2019 ಪ್ರಜಾಸತ್ತೆಯ ಮಹಾಹಬ್ಬಕ್ಕೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

ನವದೆಹಲಿ: 2019 ಪ್ರಜಾಸತ್ತೆಯ ಮಹಾಹಬ್ಬಕ್ಕೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜಕೀಯ  ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

ನಾವು ಬೇರೆ ಬೇರೆ ರಾಜಕೀಯ ಪಕ್ಷಗಳಿಗೂ ಸೇರಿದ್ದರೂ ಭಾರತದ ಅಭಿವೃದ್ಧಿ ಹಾಗೂ ಪ್ರತಿಯೊಬ್ಬ ಭಾರತೀಯರ ಬಲವರ್ಧನೆ  ನಮ್ಮ ಗುರಿಯಾಗಿದೆ ಎಂದು ಅವರು  ಟ್ವೀಟ್ ಮಾಡಿದ್ದಾರೆ.
2014ರಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದ ಯುಪಿಎ ಅನ್ನು ಜನರು ತಿರಸ್ಕರಿಸಿದ್ದರು.  ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 130 ಕೋಟಿ ಭಾರತೀಯರ ಆಶೀರ್ವಾದದಿಂದ ಹಿಂದೆ ಮಾಡಲಾಗದಿದ್ದನ್ನು  ಸಾಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
2019 ಚುನಾವಣೆಯೊಂದಿಗೆ ಸಕಾರಾತ್ಮಕ ಹಾಗೂ ಭರವಸೆಯ ಸ್ಪೂರ್ತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಪೂರ್ಣಗೊಳಿಸೋಣ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ