ದೇಶ

ಸಾಮಾಜಿಕ ಜಾಲತಾಣಗಳಿಗೂ ಅನ್ವಯ ಚುನಾವಣಾ ನೀತಿ ಸಂಹಿತೆ: ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ

Srinivas Rao BV
ನವದೆಹಲಿ: ಮಾ.10 ರಂದು 2019 ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. 
ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಿಗೂ ಸಹ ಚುನಾವಣಾ ನೀತಿ ಸಂಹಿತೆ ಅನ್ವಯವಾಗಲಿದೆ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಸಾಮಾಜಿಕ ಜಾಲತಾಣದ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕೆಂಬ ನಿಯಮವನ್ನು ಜಾರಿಗೆ ತರಲಾಗಿದೆ. 
ಚುನಾವಣಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವಾಗ ಕೆಲವು ಮಾರ್ಗಸೂಚಿಗಳನ್ನು ಚುನಾವಣಾ ಆಯೋಗ ವಿಧಿಸಿದೆ. 
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೆ ಚುನಾವಣಾ ಆಯೋಗದಿಂದ ಮಾರ್ಗಸೂಚಿಗಳು
  1. ಆನ್ ಲೈನ್ ಗಳಲ್ಲಿ ರಾಜಕೀಯ ಜಾಹಿರಾತುಗಳಿಗೆ ಪಿ-ಸರ್ಟಿಫಿಕೇಶನ್ ಅಗತ್ಯ 
  2. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದಕ್ಕೆ ವ್ಯಯಿಸುವ ಹಣವೂ ಚುನಾವಣಾ ಖರ್ಚು-ವೆಚ್ಚಗಳ ಮಿತಿಯ ವ್ಯಾಪ್ತಿಯಲ್ಲೇ ಬರಲಿದೆ 
  3. ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಕಟಿಸುವ ಪೋಸ್ಟ್ ಗಳಿಗೂ ಚುನಾವಣಾ ನೀತಿ ಸಂಹಿತೆ ಅನ್ವಯವಾಗಲಿದೆ. 
SCROLL FOR NEXT