ನವದೆಹಲಿ: ರಂಜಾನ್ ಅವಧಿಯಲ್ಲಿ ಲೋಕಸಭೆ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ಸ್ಪಷ್ಟನೆ ನೀಡಿದ್ದು, ರಂಜಾನ್ ಉಪವಾಸ ಒಂದು ತಿಂಗಳು ನಡೆಯುತ್ತದೆ. ಇದಕ್ಕಾಗಿ ಒಂದು ತಿಂಗಳು ಚುನಾವಣೆ ಮುಂದೂಡಲು ಸಾಧ್ಯವಿಲ್ಲ. ಆದರೆ ಪ್ರಮುಖ ಹಬ್ಬದ ದಿನದಂದು ಹಾಗೂ ಶುಕ್ರವಾರಗಳಂದು ಮತದಾನವನ್ನು ತಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಂಜಾನ್ ಅವಧಿಯಲ್ಲಿ ಲೋಕಸಭೆ ಚುನಾವಣೆ ಘೋಷಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಕೋಲ್ಕತಾದ ಮೇಯರ್ ಫಿರಹದ್ ಹಕೀಮ್ ಅವರು ಬಿಜೆಪಿ ಅಲ್ಪಸಂಖ್ಯಾತ ಮತದಾನವನ್ನು ಬಯಸುವುದಿಲ್ಲ. ಆದ್ದರಿಂದ, ರಂಜಾನ್ ಸಮಯದಲ್ಲಿ ಮತದಾನದ ಘೋಷಣೆ ಮಾಡಿದೆ. ಆದರೆ ನಾವು ಚಿಂತಿಸುವುದಿಲ್ಲ, ನಾವು ಮತ ಚಲಾಯಿಸುತ್ತೇವೆ ಎಂದು ಹೇಳಿದ್ದರು.
ಈ ಮಧ್ಯೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತಿದ್ದು, ರಂಜಾನ್ ಮುಸ್ಲಿಮರ ಮತದಾನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮುಸ್ಲಿಂ ಸಮುದಾಯ ಮತ್ತು ರಂಜಾನ್ ಅನ್ನು ರಾಜಕೀಯಕ್ಕೆ ಬಳಸಬೇಡಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics