ಬಾಲಾಕೋಟ್ ವೈಮಾನಿಕ ದಾಳಿ ಮತ್ತೆ ಮೋದಿ ಸರ್ಕಾರ ಬರಲು ಸಹಾಯವಾಗುತ್ತೆ: ಯೋಗಿ
ಕಳೆದ ತಿಂಗಳು ಪಾಕಿಸ್ತಾನದ ಉಗ್ರ ನೆಲೆ ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿ ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಸಹಾಯವಾಗುತ್ತದೆ ...
ಲಕ್ನೋ: ಕಳೆದ ತಿಂಗಳು ಪಾಕಿಸ್ತಾನದ ಉಗ್ರ ನೆಲೆ ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿ ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಸಹಾಯವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಯೋಗಿ. ಆದಿತ್ಯನಾಥ್, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನ ನೆಲದ ಮೇಲೆ ನಡೆಸಿದ ವೈಮಾನಿಕ ದಾಳಿ ಮಹತ್ವವಾದದ್ದು, ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲುವು ಸಾಧಿಸಲು ಸಹಾಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ತಮ್ಮ ಟ್ವೀಟರ್ ನಲ್ಲಿ ಸರಣಿ ಟ್ವಿಟ್ ಮಾಡಿದ್ದ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಜೊತೆಗೆ 2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 74 ಸೀಟುಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.