ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ರಾಧಾಕೃಷ್ಣ ಪಾಟೀಲ್ ಪುತ್ರ ಬಿಜೆಪಿ ಸೇರ್ಪಡೆ
ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೇ ಪಾಟೀಲ್ ಅವರು ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮುಂಬೈ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೇ ಪಾಟೀಲ್ ಅವರು ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಧಾಕೃಷ್ಣ ಪಾಟೀಲ್ ಅವರು ಮಹಾರಾಷ್ಟ್ರ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದು, ಅವರ ಪುತ್ರ ಸುಜಯ್ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರಾವ್ ಸಾಹೇಬ್ ದನ್ವೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು,
ಸುಜಯ್ ಅವರು ಅಹಮ್ಮದನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಅಹಮ್ಮದನಗರದಲ್ಲಿ ದಿಲಿಪ್ ಗಾಂಧಿ ಅವರು ಹಾಲಿ ಬಿಜೆಪಿ ಸಂಸದರಾಗಿದ್ದಾರೆ.