ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಕಾಪ್ಟರ್ ಹಗರಣ: ತಿಹಾರ್ ಜೈಲಿನಲ್ಲಿ ಕ್ರಿಶ್ಚಿಯನ್ ಮೈಕೆಲ್ ವಿಚಾರಣೆಗೆ ಕೋರ್ಟ್ ಅಸ್ತು

ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್...

ನವದೆಹಲಿ: ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಅವರನ್ನು ತಿಹಾರ್ ಜೈಲಿನಲ್ಲಿಯೇ ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಸಿಬಿಐ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.
ಮೈಕೆಲ್ ಹೆಚ್ಚಿನ ವಿಚಾರಣೆಗೆ ಅನುಮತಿ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿಯನ್ನು ಎರಡು ದಿನ ವಿಚಾರಣೆ ಒಳಪಡಿಸಲು ಅನಮತಿ ನೀಡಿ, ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದ್ದಾರೆ.
ಜಾರಿ ನಿರ್ದೇಶನಾಲಯ ಮೈಕಲ್ ಅವರನ್ನು ಬುಧವಾರ ಮತ್ತು ಗುರುವಾರ ವಿಚಾರಣೆಗೆ ಒಳಪಡಿಸಲಿದೆ.
12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್​ಪಿ ತ್ಯಾಗಿ ಹಾಗೂ ಕ್ರಿಶ್ಚಿಯನ್ ಮೈಕೆಲ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್ ಸಲ್ಲಿಸಿದ್ದು, ಈ ಒಪ್ಪಂದದಿಂದ ಸರ್ಕಾರದ ಖಜಾನೆಗೆ 3,600 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದೆ.
ಈ ಒಪ್ಪಂದವು ಸಾಕಾರಗೊಳ್ಳಲು ನೆರವಾಗುವ ಕಾರ್ಯಕ್ಕೆ ಅಗಸ್ಟವೆಸ್ಟ್​ಲ್ಯಾಂಡ್ ಸಂಸ್ಥೆಯಿಂದ ಕ್ರಿಶ್ಚಿಯನ್ ಮೈಕೆಲ್​ ಸುಮಾರು 225 ಕೋಟಿ ರು. ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!