ದೇಶ

ಇಥಿಯೋಪಿಯಾದಲ್ಲಿ ವಿಮಾನ ಪತನ; ಭಾರತದಲ್ಲೂ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟಕ್ಕೆ ನಿಷೇಧ

Srinivasamurthy VN
ನವದೆಹಲಿ: ಇಥಿಯೋಪಿಯಾದಲ್ಲಿ 157 ಪ್ರಯಾಣಿಕರ ಧಾರುಣ ಸಾವಿಗೆ ಕಾರಣವಾಗಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನ ಪ್ರಕರಣದ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಈ ಮಾದರಿಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಹಾಕಿದೆ.
ಬೋಯಿಂಗ್ 737 ವಿಮಾನಗಳು ಪದೇ ಪದೇ ಅಪಘಾತಕ್ಕೀಡಾಗುತ್ತಿದ್ದು, ಇದೇ ಕಾರಣಕ್ಕೆ ಈ ಹಿಂದೆ ಬ್ರಿಟನ್, ಜರ್ಮನಿ, ಫ್ರಾನ್ಸ್, ಸಿಂಗಾಪುರ, ಆಸ್ಟ್ರೇಲಿಯಾ, ಮಲೇಷ್ಯಾ, ಚೀನಾ ಮತ್ತು ಒಮನ್ ರಾಷ್ಟ್ರಗಳು ಈ ಮಾದರಿಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರಿವೆ. ಅಂತೆಯೇ ಇಥಿಯೋಪಿಯಾ ದುರಂತದ ಬೆನ್ನಲ್ಲೇ ಬೋಯಿಂಗ್ ಸಂಸ್ಥೆ ಈ ವಿಮಾನದ ತಾಂತ್ರಿಕ ಪರಿಶೀಲನೆ ನಡೆಸುವುದಾಗಿ ಹೇಳಿಕೆ ನೀಡಿದೆ.
ಬೋಯಿಂಗ್ ಸಂಸ್ಥೆ ಕೂಡ ಈ ವಿಮಾನ  ಮಾದರಿಗೆ ತುರ್ತು ಸುಧಾರಣೆ ಮಾಡಲು  ಆದೇಶ ನೀಡಿದೆ. ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 
ಇದರ ಬೆನ್ನಲ್ಲೇ ಭಾರತದ ಕೇಂದ್ರ ನಾಗರಿಕ ವಿಮಾನಯಾನ ಸಂಸ್ಥೆ ಡಿಜಿಸಿಎ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟ ನಿಷೇಧಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಭಾರತದಲ್ಲಿನ ಎಲ್ಲ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳು ಹಾರಾಟ ಸ್ಥಗಿತಗೊಳಿಸಿವೆ. ಈ ಪೈಕಿ ಸ್ಪೈಸ್ ಜೆಟ್ ಸಂಸ್ಥೆ ತನ್ನ 7 ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಹಾರಾಟವನ್ಮು ಸ್ಥಗಿತಗೊಳಿಸಿರುವುದಾಗಿ ಘೋಷಣೆ ಮಾಡಿದೆ.
SCROLL FOR NEXT