ದೇಶ

ಯುಪಿಎ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ರಾಹುಲ್

Lingaraj Badiger
ಚೆನ್ನೈ: ಈ ಬಾರಿ ಯುಪಿಎ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದ ಸ್ಟೆಲ್ಲಾ ಮ್ಯಾರಿಸ್ ಮಹಿಳಾ ಕಾಲೇಜ್ ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ರಾಹುಲ್, ಯುಪಿಎ ಅಧಿಕಾರಕ್ಕೆ ಬಂದರೆ ಜಿಎಸ್ ಟಿ ಪ್ರಕ್ರಿಯೆಯನ್ನು ಸುಲಭಗೊಳಿಸಲಿದೆ ಎಂದು ಭರವಸೆ ನೀಡಿದರು.
ಸಂಸ್ಕೃತಿಯ ವಿಚಾರದಲ್ಲಿ ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದಲ್ಲಿ ಮಹಿಳೆಯ ಸ್ಥಿತಿ ಉತ್ತಮವಾಗಿದೆ ಎಂದು ರಾಹುಲ್ ಹೇಳಿದರು.
ಲೋಕಸಭೆ ಚುನಾವಣೆ ಬಳಿಕ ಯುಪಿಎ ಸರ್ಕಾರ ರಚನೆಯಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿದಲ್ಲಿ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಸಂವಾದದಲ್ಲಿ ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಯುಪಿಎ ಯೋಜನೆಗಳು, ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವುದು, ರಾಬರ್ಟ್ ವಾದ್ರಾ ವಿರದ್ಧದ ಆರೋಪಗಳು ಹಾಗೂ ಸಂಸತ್ತಿನಲ್ಲಿ ತಾವು ಪ್ರಧಾನಿ ಮೋದಿಯನ್ನು ಅಪ್ಪಿಕೊಂಡಿದ್ದು ಸೇರಿದಂತೆ ಹಲವು ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಿದರು.
SCROLL FOR NEXT