ದೇಶ

ಜಮ್ಮು-ಕಾಶ್ಮೀರ ವಿಧಾನಸಭೆಗೆ ಜೂನ್ ನಲ್ಲಿ ಚುನಾವಣೆ?

Sumana Upadhyaya
ಶ್ರೀನಗರ: ಜುಲೈ 1ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಗೆ ಮುನ್ನ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಅಮರನಾಥ ಯಾತ್ರೆಗೆ ಮುನ್ನ ಸಕಲ ಭದ್ರತೆಯೊಂದಿಗೆ ವಿಧಾನಸಭೆ ಚುನಾವಣೆ ನಡೆಸಬೇಕು ಎಂಬ ಬಗ್ಗೆ ಸಾಮಾನ್ಯ ಅಭಿಪ್ರಾಯ ವ್ಯಕ್ತವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಮರು ಚಿಂತನೆ ನಡೆಯುತ್ತಿದೆ. ಚುನಾವಣಾ ಆಯೋಗದ ವೀಕ್ಷಕರು ಇಂದು ಶ್ರೀನಗರಕ್ಕೆ ಬರುತ್ತಾರೆ. ತಂಡ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಯ ಜತೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯನ್ನು ನಡೆಸುತ್ತಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೊರ ಘೋಷಣೆ ಮಾಡಿದ 5 ದಿನಗಳು ಕಳೆದ ನಂತರ ಕೇಂದ್ರ ಚುನಾವಣಾ ಆಯೋಗದ ತಂಡ ರಾಜ್ಯಕ್ಕೆ ಭೇಟಿ ನೀಡುತ್ತಿದೆ.
SCROLL FOR NEXT