ಸಂಗ್ರಹ ಚಿತ್ರ 
ದೇಶ

ಚೀನಾಗೆ ಭದ್ರತಾ ಮಂಡಳಿಯ ಸ್ಥಾನ, ನೆಹರು ಕೊಟ್ಟ ಉಡುಗೊರೆ; ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು

ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ಸೇರ್ಪಡೆ ಚೀನಾ ತಡೆಯಾಗಿರುವ ಕುರಿತಂತೆ ಕಾಂಗ್ರೆಸ್ ಮಾಡಿರುವ ವಾಗ್ದಾಳಿಗೆ ಕೇಂದ್ರ ಸರ್ಕಾರ ಖಡಕ್ ತಿರುಗೇಟು ನೀಡಿದೆ.

ನವದೆಹಲಿ: ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ಸೇರ್ಪಡೆ ಚೀನಾ ತಡೆಯಾಗಿರುವ ಕುರಿತಂತೆ ಕಾಂಗ್ರೆಸ್ ಮಾಡಿರುವ ವಾಗ್ದಾಳಿಗೆ ಕೇಂದ್ರ ಸರ್ಕಾರ ಖಡಕ್ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಚೀನಾಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ಸ್ಥಾನವನ್ನು ಅಂದಿನ ಪ್ರಧಾನಿ ಜವಹರ್ ಲಾಲ್ ನೆಹರೂ ಅವರು ನೀಡಿದ್ದ ಉಡುಗೊರೆ ಎಂದು ಹೇಳಿದ್ದಾರೆ. ಆ ಮೂಲಕ ಭಾರತದ ಇಂದಿನ ಸ್ಥಿತಿಗೆ ನೆಹರೂ ಅವರೇ ಕಾರಣ ಎಂದು ಕಾಂಗ್ರೆಸ್ ವಿರುದ್ಧ ರವಿಶಂಕರ್ ಪ್ರಸಾದ್ ನೇರ ವಾಗ್ದಾಳಿ ಮಾಡಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟೀಕೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರವಿಶಂಕರ್ ಪ್ರಸಾದ್, ಉಗ್ರ ಮಸೂದ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ವಿಭಿನ್ನ ನಿಲುವು ತಾಳಿದಂತಿದೆ. ಈ ಹಿಂದೆ ಇದೇ ಉಗ್ರನ ಕುರಿತು ಯುಪಿಎ ಸರ್ಕಾರದ ಅವಧಿಯಲ್ಲಿ ಜಾಗತಿಕ ಪಟ್ಟಿ ಸೇರಿಸಲು ವಿಫಲವಾಗಿತ್ತು. ಉಗ್ರ ಮಸೂದ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನ ವಿಫಲವಾಗಿದ್ದಕ್ಕೆ ರಾಹುಲ್ ಗಾಂಧಿ ಸಂಭ್ರಮ ಮಾಡುತ್ತಿರುವಂತಿದೆ. ಆದರೆ ಇದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಚೀನಾಗೆ ಭದ್ರತಾ ಮಂಡಳಿಯ ಸದಸ್ಯ ಸ್ಥಾನ ಸಿಕ್ಕಿತ್ತು. ನೆಹರು ಮಾಡಿದ್ದ ಒಂದು ತಪ್ಪಿನಿಂದಾಗಿ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಚೀನಾ ಸ್ಥಾನ ಸಂಪಾದಿಸಿದೆ. ಅದು ನೆಹರೂ ಚೀನಾಗೆ ನೀಡಿದ್ದ ಉಡುಗೊರೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT