ಮಮತಾಗೆ ಹಿನ್ನಡೆ, ಟಿಎಂಸಿ ಶಾಸಕ ಅರ್ಜುನ್ ಸಿಂಗ್ ಬಿಜೆಪಿ ಸೇರ್ಪಡೆ
ಲೋಕಸಭೆ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಟಿಎಂಸಿ ಹಾಲಿ ಶಾಸಕ ಅರ್ಜುನ್...
ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಟಿಎಂಸಿ ಹಾಲಿ ಶಾಸಕ ಅರ್ಜುನ್ ಸಿಂಗ್ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಉತ್ತರ 24 ಪರಾಗಣ ಕ್ಷೇತ್ರದ ಶಾಸಕರಾಗಿದ್ದ ಅರ್ಜುನ್ ಸಿಂಗ್ ಅವರು ಬರಾಕ್ ಪೋರ್ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಅರ್ಜನ್ ಸಿಂಗ್ ಅವರು ಇಂದು ಟಿಎಂಸಿ ತೊರೆದು ಬಿಜೆಪಿ ಸೇರಿದ್ದಾರೆ.
ಕಳೆದ ಮಂಗಳವಾರ ಟಿಎಂಸಿ ಮಾಜಿ ಸಂಸದ ಅನುಪಮ್ ಹಜ್ರಾ ಅವರು ಸಹ ದೀದಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.