ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ
ನವದೆಹಲಿ: ಹಣದ ದುರ್ಬಳಕೆಯಿಂದ ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಗುಪ್ತಚರಕ್ಕೆ ಸಂಬಂಧಿಸಿದ ಬಹು ಇಲಾಖೆಗಳ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮಾಡುವ ವೆಚ್ಚಕ್ಕೆ ಸಂಬಂಧಿಸಿದಂತೆ ವಿಸ್ತೃತ ಮಾರ್ಗಸೂತ್ರವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ವೆಚ್ಚದ ಮೇಲ್ವಿಚಾರಣಾ ವ್ಯವಸ್ಥೆಯು ಪ್ರಬಲವಾಗಿದೆ ಮತ್ತು ಯಶಸ್ಸಿನ ಚುನಾವಣೆಗಳಲ್ಲಿ ನಮ್ಮ ಜಾರಿ ತಂಡಗಳು ಬೃಹತ್ ಪ್ರಮಾಣದಲ್ಲಿ ವಸ್ತು, ನಗದನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಸುನೀಲ್ ಅರೋರಾ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos