ಹಾರ್ದಿಕ್ ಪಟೇಲ್ 
ದೇಶ

ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್, ಸೆಕ್ಸ್ ವಿಡಿಯೋದಲ್ಲಿನ ಹಾರ್ದಿಕ್ ಪೋಟೋ ಅಪ್ ಲೋಡ್

ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾದ ನಂತರ ಅಪರಿಚಿತ ವ್ಯಕ್ತಿಗಳು ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಸೆಕ್ಸ್ ವಿಡಿಯೋದಲ್ಲಿರುವಂತೆ ಹಾರ್ದಿಕ್ ಪೋಟೋವೊಂದನ್ನು ಅದರಲ್ಲಿ ಅಪ್ ಲೋಡ್ ಮಾಡಲಾಗಿದೆ.

ಗುಜರಾತ್ : ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್  ಕಾಂಗ್ರೆಸ್ ಸೇರ್ಪಡೆಯಾದ ನಂತರ ಅಪರಿಚಿತ ವ್ಯಕ್ತಿಗಳು ಗುಜರಾತ್ ಕಾಂಗ್ರೆಸ್  ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಸೆಕ್ಸ್ ವಿಡಿಯೋದಲ್ಲಿರುವಂತೆ ಹಾರ್ದಿಕ್ ಪೋಟೋವೊಂದನ್ನು ಅದರಲ್ಲಿ ಅಪ್ ಲೋಡ್ ಮಾಡಲಾಗಿದೆ.

ಗುಜರಾತ್ ಚುನಾವಣೆ ಸಂದರ್ಭದಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿಯಲ್ಲಿ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದಾರೆ.ಈ ಪೋಟೋ ಕೆಳಗಡೆ ವೆಲ್ ಕಮ್ ಅವರ್ ನ್ಯೂ ಲೀಡರ್ ಎಂದು ಬರೆಯಲಾಗಿದೆ.

ವೆಬ್ ಸೈಟ್ ದುರ್ಬಳಕೆ ಆಗಿರುವುದು ಕಂಡುಬಂದ ನಂತರ ಮಾಹಿತಿ ತಂತ್ರಜ್ಞಾನ ಅಧಿಕಾರಿಗಳು ಕೂಡಲೇ ಆ ವೆಬ್ ಸೈಟ್ ನ್ನು ಸ್ಥಗಿತಗೊಳಿಸಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್  ವಕ್ತಾರ ಮನಿಷ್ ದೊಶಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಹಾರ್ದಿಕ್ ಪಟೇಲ್ ಬಂದಿರುವುದಕ್ಕೆ ಅಸಮಾಧಾನಗೊಂಡಂತಹವರು ಇದನ್ನು ಮಾಡಿರುವ ಸಾಧ್ಯತೆ ಇದ್ದು, ಪೊಲೀಸರಿಗೆ ದೂರು ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಗುಜರಾತ್ ಚುನಾವಣೆ ಸಂದರ್ಭದಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿಯಲ್ಲಿರುವಂತೆ  ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದರು.
ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ,  ಇದು ನಕಲಿ ವಿಡಿಯೋ, ಅದರಲ್ಲಿರುವುದು ನಾನಲ್ಲ ಎಂದು ಹಾರ್ದಿಕ್ ಪಟೇಲ್ ಹೇಳಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT