ದೇಶ

ಪಕ್ಷ ಸೇರುವಂತೆ ಕಾಂಗ್ರೆಸ್ ನಿಂದ ಆಫರ್ ಬಂದರೆ ಪರಿಗಣಿಸುತ್ತೇನೆ: ಅಲ್ಕಾ ಲಂಬಾ

Shilpa D
ನವದೆಹಲಿ: ಪಕ್ಷ ಸೇರುವಂತೆ ಆಫರ್ ಬಂದರೇ ಅದನ್ನು ಗೌರವಯುತವಾಗಿ ಪರಿಗಣಿಸುತ್ತೇನೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ನಾಯಕಿ, ಶಾಸಕಿ ಅಲ್ಕಾ ಲಂಬಾ ಹೇಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. 
ಬಿಜೆಪಿಯನ್ನು ಆಡಳಿತದಿಂದ ದೂರ ಇಡಬಲ್ಲ ಪಕ್ಷ ಎಂದೆನಿಸಿದ್ದರಿಂದ ನಾನು ಎಎಪಿ ಸೇರಿದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಚಾಂದಿನಿ ಚೌಕ್ ಹಾಗೂ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪ್ರಭಾವ ಹೆಚ್ಚಿಸಿಕೊಂಡಿದೆ. ಎಎಪಿ ಉದ್ದೇಶವೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ಆಗಿದ್ದಲ್ಲಿ ನಾನು ಕಾಂಗ್ರೆಸ್ ಸೇರಿ ಅಧಿಕೃತವಾಗಿ ಮೂಲ ಉದ್ದೇಶದ ಪರ ಹೋರಾಟ ನಡೆಸುವುದರಲ್ಲಿ ತಪ್ಪೇನಿಲ್ಲ, ನನಗೆ ಕಾಂಗ್ರೆಸ್ ಜೊತೆ 20 ವರ್ಷಗಳ ನಂಟಿದೆ ಎಂದು ಹೇಳಿದ್ದಾರೆ,.
1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡವನ್ನು ನಿಯಂತ್ರಿಸಲಾಗದ ರಾಜೀವ್ ಗಾಂಧಿ ಅವರಿಗೆ ಭಾರತ ರತ್ನ ನೀಡಿದ್ದು ಸರಿಯಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸಿಎಂ ಕೇಜ್ರಿವಾಲ್ ವಿರುದ್ಧವೆ ದನಿಯೆತ್ತಿದ್ದರು.
SCROLL FOR NEXT