ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ಉಗ್ರರಿಂದ ಮಹಿಳಾ ವಿಶೇಷ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಮಹಿಳಾ ವಿಶೇಷ ಪೊಲೀಸ್ ಅಧಿಕಾರಿ(ಎಸ್ ಪಿಒ)ಯನ್ನು ಅವರ ಮನೆಗೆ ನುಗ್ಗಿ...

ಸಾಂದರ್ಭಿಕ ಚಿತ್ರ
Lingaraj Badiger
Updated On : 16 Mar 2019, 4:12 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಮಹಿಳಾ ವಿಶೇಷ ಪೊಲೀಸ್ ಅಧಿಕಾರಿ(ಎಸ್ ಪಿಒ)ಯನ್ನು ಅವರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಉಗ್ರರಿಂದ ಹತ್ಯೆಯಾದ ಮಹಿಳಾ ಅಧಿಕಾರಿಯನ್ನು ಖುಷ್ಬೂ ಜಾನ್ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಶೋಪಿಯಾನ್ ಜಿಲ್ಲೆಯ ವೆಹಿಲ್ ನಲ್ಲಿರುವ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿದ್ದ ಎಸ್ ಪಿಒ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Advertisement

Advertisement

ಘಟನೆ ನಂತರ ಭದ್ರತಾ ಪಡೆಗಳು ವೆಹಿಲ್ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments